Bangalore News

ಬೆಂಗಳೂರು ನಗರದಲ್ಲಿ ಇನ್ನೂ ಎರಡು ದಿನ ಮಳೆಯಾಗುವ ಮುನ್ಸೂಚನೆ

ಬೆಂಗಳೂರು (Bengaluru): ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿದೆ (Bengaluru Rains). ಶನಿವಾರ ಹಾಗೂ ಭಾನುವಾರ ಮಳೆಯಿಂದಾಗಿ ನಗರವಾಸಿಗಳ ವಾರಾಂತ್ಯದ ಉತ್ಸಾಹ ಕುಗ್ಗಿತು.

ಕಳೆದೆರಡು ದಿನಗಳಿಂದ ಮಳೆ ಸುರಿಯುತ್ತಿದೆ, ಶನಿವಾರ ಸಂಜೆ ಏಕಾಏಕಿ ಅರ್ಧ ಗಂಟೆಗೂ ಹೆಚ್ಚು ಕಾಲ ಮಳೆ ಸುರಿಯಿತು. ನಗರದ ರಸ್ತೆಗಳು ಜಲಾವೃತಗೊಂಡಿದ್ದರಿಂದ ವಾಹನ ಸವಾರರು, ವಿದ್ಯಾರ್ಥಿಗಳು ಹಾಗೂ ಮನೆಗೆ ತೆರಳುವ ನೌಕರರು ತೊಂದರೆ ಅನುಭವಿಸಿದರು.

ಬೆಂಗಳೂರು ನಗರದಲ್ಲಿ ಇನ್ನೂ ಎರಡು ದಿನ ಮಳೆಯಾಗುವ ಮುನ್ಸೂಚನೆ

ಬೆಂಗಳೂರು ದಕ್ಷಿಣದ ಜಯನಗರ ಮತ್ತು ಚಾಮರಾಜಪೇಟೆಯಲ್ಲಿ ಹೆಚ್ಚು ಮಳೆಯಾಗಿದೆ. ಈಜಿಪುರ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ನೀರು ನಿಂತಿತ್ತು.

ಇಂದಿರಾನಗರ ಮತ್ತು ಬೈಯಪ್ಪನಹಳ್ಳಿ ಭಾಗದಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ಕೆಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿತ್ತು. ಇನ್ನೂ ಎರಡು ದಿನ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ (Weather Update) ತಿಳಿಸಿದೆ.

Rain likely for two more days in Bengaluru city

Our Whatsapp Channel is Live Now 👇

Whatsapp Channel

Related Stories