ಬೆಂಗಳೂರು ಹೊರತುಪಡಿಸಿ ಕರ್ನಾಟಕದ 19 ಜಿಲ್ಲೆಗಳಲ್ಲಿ ಡಿಸೆಂಬರ್ 28ರವರೆಗೆ ಮಳೆ
ಡಿಸೆಂಬರ್ 28ರಿಂದ 29ರವರೆಗೆ ರಾಜ್ಯದ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಕಾಣಬಹುದು. ಡಿಸೆಂಬರ್ 28ರವರೆಗೆ ಮಳೆ ಸುರಿಯುವ ಸಾಧ್ಯತೆಯಿದೆ.
Karnataka Rain Update: ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 19ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಡಿಸೆಂಬರ್ 28ರವರೆಗೆ ಮಳೆ ಸುರಿಯುವ ಸಾಧ್ಯತೆಯಿದೆ.
ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ದಾವಣಗೆರೆ, ಚಿಕ್ಕಮಗಳೂರು, ಚಾಮರಾಜನಗರ, ಬಳ್ಳಾರಿ, ಕಲಬುರಗಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಹಲವೆಡೆ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಬಂಗಾಳಕೊಲ್ಲಿಯಲ್ಲಿ ನಿರ್ಮಾಣವಾದ ಕಡಿಮೆ ಒತ್ತಡದ ಪ್ರದೇಶದ ಪರಿಣಾಮವಾಗಿ ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ಕರ್ನಾಟಕದಲ್ಲೂ ಮಳೆ ಸಂಭವಿಸುವ ಸಾಧ್ಯತೆ ಇದೆ. ದಾವಣಗೆರೆಯಲ್ಲಿ ಕನಿಷ್ಠ ಉಷ್ಣಾಂಶ 16.0 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಬೆಂಗಳೂರಿನಲ್ಲಿ (Bengaluru) ಮೋಡಕವಿದ ವಾತಾವರಣವಿದ್ದು ಶುಕ್ರವಾರ ಮಳೆಯಾಗುವ ನಿರೀಕ್ಷೆಯಿದೆ.
ಡಿಸೆಂಬರ್ 28ರಿಂದ 29ರವರೆಗೆ ರಾಜ್ಯದ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಕಾಣಬಹುದು. ಡಿಸೆಂಬರ್ 25ರ ಬೆಳಗಿನ ಮುನ್ಸೂಚನೆ ಪ್ರಕಾರ, ಬೆಂಗಳೂರಿನ ವಾತಾವರಣ (Bengaluru Weather Update) ಭಾಗಶಃ ಮೋಡದಿಂದ ಕವಿಯಲಿದೆಎನ್ನಲಾಗಿತ್ತು.
Rain Likely in Karnataka Till December 28, Warns Weather Department