ಬೆಂಗಳೂರು: ರೇಷನ್ ಕಾರ್ಡ್ ಇ-ಕೆವೈಸಿಗೆ 500 ರೂಪಾಯಿ ಪಡೆದ ರೇಷನ್ ಅಂಗಡಿ ಲೈಸೆನ್ಸ್ ರದ್ದು

ಪಡಿತರ ಚೀಟಿದಾರರಿಂದ ಇ-ಕೆವೈಸಿ ಮಾಡಲು ಹಣ ಪಡೆದ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ನ್ಯಾಯಬೆಲೆ ಅಂಗಡಿಯ ಪರವಾನಗಿಯನ್ನು ಆಹಾರ ಇಲಾಖೆ ರದ್ದುಪಡಿಸಿದ್ದು, ಕಠಿಣ ಕ್ರಮದ ಎಚ್ಚರಿಕೆ ನೀಡಿದೆ.

  • ಇ-ಕೆವೈಸಿಗೆ ₹500 ಪಡೆದ ಆರೋಪ
  • ನ್ಯಾಯಬೆಲೆ ಅಂಗಡಿ ಲೈಸೆನ್ಸ್ ರದ್ದು
  • ಆಹಾರ ಇಲಾಖೆಯಿಂದ ಖಡಕ್ ವಾರ್ನಿಂಗ್

ಬೆಂಗಳೂರು (Bengaluru): ಪಡಿತರ ಚೀಟಿದಾರರಿಂದ ಇ-ಕೆವೈಸಿ (Ration Card e-KYC) ಮಾಡಿಸಲು ಹಣ ಪಡೆದ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ನ್ಯಾಯಬೆಲೆ ಅಂಗಡಿಯ (Ration Shop) ಪರವಾನಗಿಯನ್ನು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ರದ್ದುಪಡಿಸಿದೆ.

ಬೆಂಗಳೂರು ದಕ್ಷಿಣ ವಲಯದ ಚಂದ್ರಪ್ಪನಗರ ಆರ್‌ಸಿಎಚ್‌ಎಸ್‌ನಲ್ಲಿರುವ ಬಿಎಲ್‌ಎಸ್ 272 ಸಂಖ್ಯೆಯ ನ್ಯಾಯಬೆಲೆ ಅಂಗಡಿ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ. ಪಡಿತರ ಚೀಟಿದಾರರೊಬ್ಬರಿಂದ ಇ-ಕೆವೈಸಿ ಮಾಡಿಸಲು ₹500 ರೂಪಾಯಿ ಹಣ ಪಡೆದಿರುವ ಆರೋಪ ಅಂಗಡಿ ವಿರುದ್ಧ ಕೇಳಿಬಂದಿತ್ತು.

ಇದನ್ನೂ ಓದಿ: ಹೊಸ ಬಿಪಿಎಲ್ ರೇಷನ್ ಕಾರ್ಡ್ ಮಾಡಿಸೋಕೆ ಕಾಯ್ತಾ ಇದ್ದೋರಿಗೆ ಭರ್ಜರಿ ಗುಡ್ ನ್ಯೂಸ್

ದೂರು ಪರಿಶೀಲಿಸಿದ ಬಳಿಕ ಇಲಾಖೆ ಅಂಗಡಿಯ ಪರವಾನಗಿ (Licence) ರದ್ದುಗೊಳಿಸುವ ನಿರ್ಧಾರ ಕೈಗೊಂಡಿದೆ. ಪಡಿತರ ಚೀಟಿದಾರರಿಗೆ ಉಚಿತವಾಗಿ ದೊರೆಯಬೇಕಾದ ಸೇವೆಗಳಿಗೆ ಹಣ ವಸೂಲಿ ಮಾಡುವುದನ್ನು ಇಲಾಖೆ ಗಂಭೀರವಾಗಿ ಪರಿಗಣಿಸಿದೆ.

ಇದೇ ವೇಳೆ, ಇ-ಕೆವೈಸಿ ಸೇರಿದಂತೆ ಪಡಿತರ ವ್ಯವಸ್ಥೆಗೆ (PDS) ಸಂಬಂಧಿಸಿದ ಸೇವೆಗಳಿಗೆ ಹಣ ಪಡೆಯುವ ಕುರಿತು ದೂರುಗಳು ಬಂದರೆ ಮುಂದೆ ಯಾವುದೇ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಇಲಾಖೆ ರಾಜ್ಯದ ನ್ಯಾಯಬೆಲೆ ಅಂಗಡಿಗಳಿಗೆ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ಗೃಹಜ್ಯೋತಿ ಯೋಜನೆ: 34.76 ಲಕ್ಷ ಕುಟುಂಬಗಳಿಗೆ ಉಚಿತ ವಿದ್ಯುತ್ ಸೌಲಭ್ಯ ಸ್ಥಗಿತ! ಇಲ್ಲಿದೆ ಕಾರಣ

ಸರ್ಕಾರದ ಪಡಿತರ ಸೇವೆಗಳನ್ನು ಪಡೆಯುವ ಸಂದರ್ಭದಲ್ಲಿ ಅನಧಿಕೃತವಾಗಿ ಹಣ ಕೇಳಿದರೆ, ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡುವಂತೆ ಇಲಾಖೆ ಸೂಚಿಸಿದೆ.

English Summary▼

ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories