ಬೆಂಗಳೂರು: ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ನಿವೃತ್ತ ಶಿಕ್ಷಕರು, ಬೇಡಿಕೆ ಈಡೇರಿಕೆಗೆ ಒತ್ತಾಯ
ನಿರಂತರ ಪ್ರತಿಭಟನೆಯಲ್ಲಿ ತೊಡಗಿದ್ದ ಇಬ್ಬರು ನಿವೃತ್ತ ಶಿಕ್ಷಕರು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರು (Bengaluru): ನಿರಂತರ ಪ್ರತಿಭಟನೆಯಲ್ಲಿ ತೊಡಗಿದ್ದ ಇಬ್ಬರು ನಿವೃತ್ತ ಶಿಕ್ಷಕರು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಕಳೆದ 140 ದಿನಗಳಿಂದ ಕರ್ನಾಟಕ ಸರ್ಕಾರಿ ಶಾಲಾ ಶಿಕ್ಷಕರ ಸಂಘ ಹಾಗೂ ನಿವೃತ್ತ ಶಿಕ್ಷಕರ ಸಂಘ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ವಿವಿಧ ಬೇಡಿಕೆಗಳಿಗಾಗಿ ನಿರಂತರ ಪ್ರತಿಭಟನೆ ನಡೆಸುತ್ತಿದೆ. ವೇತನ ಹೆಚ್ಚಳ, ಹಳೆ ಪಿಂಚಣಿ ಯೋಜನೆ ಜಾರಿ ಸೇರಿದಂತೆ ನಾನಾ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಈ ಸರಣಿ ಪ್ರತಿಭಟನೆ ನಡೆಯುತ್ತಿದೆ.
ಈ ಸಂದರ್ಭದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬಾಗಲಕೋಟೆಯ ಸರ್ಕಾರಿ ಶಾಲೆಯ ನಿವೃತ್ತ ಶಿಕ್ಷಕ ಸಿದ್ದಯ್ಯ ಹಿರೇಮಠ ಹಾಗೂ ಬೆಂಗಳೂರು ಉಪನಗರ ಜಿಲ್ಲೆ ನೆಲಮಂಗಲದ ನಿವೃತ್ತ ಶಿಕ್ಷಕ ವೆಂಕಟರಾಜು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ತಮ್ಮ ಬೇಡಿಕೆ ಈಡೇರಿಕೆಗಾಗಿ ಇಬ್ಬರೂ ಆತ್ಮಹತ್ಯೆಗೆ ಯತ್ನಿಸಿರುವುದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಸದ್ಯ ಇಬ್ಬರಿಗೂ ಬೆಂಗಳೂರಿನ ವಿಕ್ಟೋರಿಯಾ ಸರ್ಕಾರಿ ಆಸ್ಪತ್ರೆಯಲ್ಲಿ ತೀವ್ರ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆಯಿಂದ ಪ್ರತಿಭಟನಾ ಸ್ಥಳದಲ್ಲಿ ಪ್ರಕ್ಷುಬ್ಧಗೊಂಡಿತ್ತು.
Retired teachers tried to commit suicide by drinking poison in Bengaluru
Follow us On
Google News |
Advertisement