ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – ಹೆಣ್ಣು ಮಕ್ಕಳೇ ಸ್ಟ್ರಾಂಗು ಗುರು

Second PUC results 2019 have been published and girls are the top performers

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಎಂದಿನಂತೆ ಈ ಬಾರಿಯೂ ಹೆಣ್ಣು ಮಕ್ಕಳೇ ಮೇಲುಗೈ ಸಾಧಿಸಿದ್ದಾರೆ, ಉಡುಪಿ ಪ್ರಥಮ, ಚಿತ್ರದುರ್ಗ ಕೊನೆಯ ಸ್ಥಾನ ಪಡೆದುಕೊಂಡಿದೆ.

“ವಿದ್ಯಾರ್ಥಿ ಜೀವನ ಬಂಗಾರದ ಜೀವನ” ಈ ಜೀವನದ ಪ್ರಮುಖ ಘಟ್ಟವಾಗಿರುವ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟಗೊಂಡಿದೆ. ಪ್ರತಿ ಸಾರಿ ಅಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸದ್ದಾರೆ.

ಚುನಾವಣೆ ನೀತಿ ಸಂಹಿತೆ ಇರುವ ಕಾರಣ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಮತ್ತು ಪಿಯುಸಿ ಬೋರ್ಡ್ ಪ್ರಭಾರ ನಿರ್ದೇಶಕಿ ಶಿಖಾ ಫಲಿತಾಂಶ ಪ್ರಕಟ ಮಾಡಿದರು.

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ - ಹೆಣ್ಣು ಮಕ್ಕಳೇ ಸ್ಟ್ರಾಂಗು ಗುರು - Kannada News

ಫಲಿತಾಂಶದಲ್ಲಿ ಮತ್ತೊಮ್ಮೆ ಉಡುಪಿ ಪ್ರಥಮ ಸ್ಥಾನದಲ್ಲಿದ್ದರೆ ದಕ್ಷಿಣ ಕನ್ನಡ ದ್ವಿತೀಯ ಸ್ಥಾನದಲ್ಲಿದೆ. ಕೊಡಗು ಮೂರನೇ ಸ್ಥಾನದಲ್ಲಿದ್ದರೆ ಚಿತ್ರದುರ್ಗ ಕೊನೆಯ ಸ್ಥಾನಕ್ಕೆ ಕುಸಿದಿದೆ.

ಕಳೆದ ಮಾರ್ಚ್ ತಿಂಗಳಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು. ಈ ಬಾರಿ ಸುಮಾರು 6.50 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು, ಸುದ್ದಿಗೋಷ್ಠಿ ಬಳಿಕ ಮಧ್ಯಾಹ್ನ 12 ಗಂಟೆ ನಂತರ ಪಿಯುಸಿ ವೆಬ್ ಸೈಟ್ ನಲ್ಲಿ ಅಧಿಕೃತವಾಗಿ ಫಲಿತಾಂಶ ಪ್ರಕಟಗೊಳ್ಳಲಿದೆ. ಮಂಗಳವಾರ ಕಾಲೇಜುಗಳಲ್ಲಿ ಫಲಿತಾಂಶ ಲಭ್ಯವಾಗಲಿದೆ.

Follow us On

FaceBook Google News

Read More News Today