Bangalore News
ಬೆಂಗಳೂರು ಹೊರವಲಯದಲ್ಲಿ ವಾಹನಗಳ ನಡುವೆ ಸರಣಿ ಅಪಘಾತ, ಓರ್ವ ಸಾವು
ವಾಹನಗಳ ನಡುವೆ ಸರಣಿ ಡಿಕ್ಕಿ ಸಂಭವಿಸಿ ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲ ತಾಲೂಕಿನ ದಾಬಸ್‌ಪೇಟೆಯಲ್ಲಿ ಸೋಮವಾರ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 48ರಲ್ಲಿ ದಾಬಸ್‌ಪೇಟೆ ವ್ಯಾಪ್ತಿಯ ಎಡೇಹಳ್ಳಿಯಲ್ಲಿ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಆಟೋ, ಕಾರು ಮತ್ತು ಲಾರಿ ಡಿಕ್ಕಿ ಹೊಡೆದಿದೆ. ಈ ವೇಳೆ ವೀರಣ್ಣ (55) ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಾರು, ಆಟೋ ಸಂಪೂರ್ಣ ಜಖಂಗೊಂಡಿವೆ. ನೆಲಮಂಗಲ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Serial Accident Between Vehicles on Bengaluru Outskirts, One Dead