ಗಣೇಶ ಚತುರ್ಥಿಯ ಪ್ರಯುಕ್ತ ಜೆಪಿ ನಗರದ ಶ್ರೀ ಸತ್ಯ ಗಣಪತಿ ದೇವಸ್ಥಾನದಲ್ಲಿ ವಿಶೇಷ ಆಲಂಕಾರ

ಗಣೇಶ ಚತುರ್ಥಿಯ ಪ್ರಯುಕ್ತ ಜೆಪಿ ನಗರದ ಶ್ರೀ ಸತ್ಯ ಗಣಪತಿ ದೇವಸ್ಥಾನದಲ್ಲಿ 10 ಬಗೆಯ ಹಣ್ಣುಗಳು ಹಾಗೂ ಹೂವುಗಳನ್ನು ಬಳಸಿ ವಿಶೇಷ ಆಲಂಕಾರ

ಬೆಂಗಳೂರು (Bengaluru) ಆಗಸ್ಟ್‌ 29 : ಗಣೇಶ ಚತುರ್ಥಿಯ ಪ್ರಯುಕ್ತ ಜೆಪಿ ನಗರದ ಶ್ರೀ ಸತ್ಯ ಗಣಪತಿ ದೇವಸ್ಥಾನದಲ್ಲಿ 10 ಬಗೆಯ ಹಣ್ಣುಗಳು ಮುಸುಕಿನ ಜೋಳ, ಸೊಪ್ಪುಗಳು ಹಾಗೂ ಹೂವುಗಳನ್ನು ಬಳಸಿಕೊಂಡು ವಿಶೇಷ ಆಲಂಕಾರವನ್ನು ಮಾಡಲಾಗಿದೆ ಎಂದು ಶ್ರೀ ಸತ್ಯ ಗಣಪತಿ ಶಿರಡಿ ಸಾಯಿ ಟ್ರಸ್ಟ್‌ನ ಟ್ರಸ್ಟಿ ರಾಮ್ ಮೋಹನ ರಾಜ್ ತಿಳಿಸಿದ್ದಾರೆ.

ಪ್ರತಿ ಬಾರಿಯೂ ವಿಶೇಷ ಆಲಂಕಾರ ಹಾಗೂ ವಿಶೇಷ ಸಾಮಗ್ರಿಗಳನ್ನು ಬಳಸಿಕೊಂಡು ಗಣೇಶ ಮೂರ್ತಿಯನ್ನು ತಯಾರಿಸುವ ಮೂಲಕ ದೇಶದ ಗಮನವನ್ನ ಈ ದೇವಸ್ಥಾನ ಸೆಳೆಯುತ್ತಿತ್ತು. ಈ ಬಾರಿ ಕೊರೊನಾ ಮಹಾಮಾರಿ ಕಡಿಮೆ ಆಗಿರುವ ನಿಟ್ಟಿನಲ್ಲಿ ವಿಶೇಷ ಆಲಂಕಾರವನ್ನು ಏರ್ಪಡಿಸಲಾಗಿದೆ.

ಗಣೇಶ ಚತುರ್ಥಿ 2022 ಈ ವಸ್ತುಗಳನ್ನು ತಪ್ಪದೆ ಅರ್ಪಿಸಿ

ಗಣೇಶ ಚತುರ್ಥಿಯ ಪ್ರಯುಕ್ತ ಜೆಪಿ ನಗರದ ಶ್ರೀ ಸತ್ಯ ಗಣಪತಿ ದೇವಸ್ಥಾನದಲ್ಲಿ ವಿಶೇಷ ಆಲಂಕಾರ - Kannada News

ಪ್ರತ್ಯೇಕವಾಗಿ ಮೂರ್ತಿಯನ್ನು ಪ್ರತಿಷ್ಠಾಪಿಸದೇ ದೇವಸ್ಥಾನದಲ್ಲಿ ಇರುವ ಮೂರ್ತಿಗೆ ವಿಶೇಷ ಆಲಂಕಾರ ಮಾಡಲಾಗಿದೆ. ಸಿಬೇಕಾಯಿ, ಕಲ್ಲಂಗಡಿ, ಡ್ರಾಗನ್‌ ಪ್ರೂಟ್‌, ದಾಳೀಂಬೆ, ಟೊಮ್ಯಾಟೋ, ಗಜ್ಜರಿ ಹೀಗೆ 10 ವಿವಿಧ ಹಣ್ಣುಗಳನ್ನು, ಮುಸುಕಿನ ಜೋಳ, ತರೇವಾರಿ ಹೂವುಗಳು ಹಾಗೂ ಸೊಪ್ಪುಗಳನ್ನು ಬಳಸಿಕೊಂಡು ಆಲಂಕಾರ ಮಾಡಲಾಗಿದೆ ಎಂದು ರಾಮ್‌ ಮೋಹನ ರಾಜ್‌ ತಿಳಿಸಿದರು.

ಗಣೇಶ ಚತುರ್ಥಿಯನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ದೃಷ್ಟಿಯಿಂದ 10 ಸಾವಿರ ಮಣ್ಣಿನ ಗಣೇಶ ಮತ್ತು ಗೌರಿ ಮೂರ್ತಿಗಳನ್ನು ವಿತರಿಸಲಾಗುತ್ತಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ರಾಮ್ ಮೋಹನ್ ರಾಜ್, ಟ್ರಸ್ಟಿಗಳು
ಮೊ: 9845044434

Special decoration at Shri Sathya Ganapati Temple in JP Nagar on the occasion of Ganesha Chaturthi

ಇವುಗಳನ್ನೂ ಓದಿ…

ಸುದೀಪ್ ಚಿತ್ರ ಕೋಟಿಗಬ್ಬ-3 ತೆಲುಗು ರಿಲೀಸ್ ಗೆ ರೆಡಿ

‘ಜವಾನ್’ ಚಿತ್ರಕ್ಕಾಗಿ ವಿಜಯ್ ಸೇತುಪತಿ ಶಾಕಿಂಗ್ ಸಂಭಾವನೆ

Follow us On

FaceBook Google News

Advertisement

ಗಣೇಶ ಚತುರ್ಥಿಯ ಪ್ರಯುಕ್ತ ಜೆಪಿ ನಗರದ ಶ್ರೀ ಸತ್ಯ ಗಣಪತಿ ದೇವಸ್ಥಾನದಲ್ಲಿ ವಿಶೇಷ ಆಲಂಕಾರ - Kannada News

Read More News Today