ಬೆಂಗಳೂರು: ಅನುಮತಿ ಪಡೆಯದೇ ಕಟ್ಟಡ ನಿರ್ಮಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ
ಅನುಮತಿ ಪಡೆಯದೇ ಕಟ್ಟಡ ನಿರ್ಮಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು.
ಬೆಂಗಳೂರು (Bengaluru): ನಿಯಮಗಳಿಗೆ ವಿರುದ್ಧವಾಗಿ ಸಂಪೂರ್ಣ ಅನುಮತಿ ಪಡೆಯದೇ ಕಟ್ಟಡ ನಿರ್ಮಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Karnataka CM Siddaramaiah) ಅಧಿಕಾರಿಗಳಿಗೆ ಸೂಚಿಸಿದರು.
ಗುರುವಾರ ಬೆಂಗಳೂರು ನಗರದ ಹೆಣ್ಣೂರು ವ್ಯಾಪ್ತಿಯ ಬಾಬುಸಾಬಪಾಳ್ಯದಲ್ಲಿ ಕುಸಿದಿರುವ 6 ಅಂತಸ್ತಿನ ಅಪಾರ್ಟ್‌ಮೆಂಟ್ ಕಟ್ಟಡವನ್ನು ಪರಿಶೀಲಿಸಿದರು. ಈ ವೇಳೆ ಸಂತ್ರಸ್ತರ ಸಂಬಂಧಿಕರು ಅಳಲು ಮತ್ತು ಆಕ್ರೋಶ ವ್ಯಕ್ತಪಡಿಸಿದರು.
ಕುಸಿತದ ಹಂತದಲ್ಲಿ ಬೆಂಗಳೂರಿನ ಮತ್ತೊಂದು ಕಟ್ಟಡ, ಕೂಡಲೇ ಕೆಡವಲು ಸೂಚನೆ
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ನಗರದಲ್ಲಿ ಅನುಮತಿ ಇಲ್ಲದೆ ಕಟ್ಟಡ ನಿರ್ಮಿಸಿದವರಿಗೆ ಸಂಬಂಧಪಟ್ಟ ಅಧಿಕಾರಿಗಳೇ ಹೊಣೆಯಾಗುತ್ತಾರೆ. ಅನಧಿಕೃತ ಕಟ್ಟಡಗಳನ್ನು ನಿರ್ಮಿಸುವುದನ್ನು ತಪ್ಪಿಸಿ. ಎಲ್ಲ ಅನುಮತಿ ಪಡೆದು ಮನೆ ನಿರ್ಮಿಸಿಕೊಳ್ಳಬೇಕು ಎಂದರು. ಕಳಪೆ ಕಾಮಗಾರಿಯಿಂದ ಕುಸಿದಿದೆ ಎಂದರು.
ಅಕ್ರಮ ಕಟ್ಟಡಗಳನ್ನು ನಿರ್ಮಿಸುತ್ತಿರುವವರಿಗೆ ನೋಟಿಸ್ ನೀಡಿದ್ದರೂ ಕಾಮಗಾರಿ ಮುಂದುವರಿಸಿದ ಮಾಲೀಕರು, ಗುತ್ತಿಗೆದಾರ ಹಾಗೂ ಎಂಜಿನಿಯರ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಸೂಚನೆ ನೀಡಲಾಗಿದೆ. ಈ ಅವಘಡಕ್ಕೆ ಮಳೆ ಕಾರಣವಲ್ಲ, ಕಳಪೆ ಕಾಮಗಾರಿ ಎಂದು ಸಿಎಂ ಹೇಳಿದರು.
Strict action against those who construct buildings without obtaining permission