ಕೋವಿಡ್ ಲಸಿಕೆಯಿಂದ ಹೃದಯಾಘಾತ ಹೆಚ್ಚಾಯ್ತ? ಅಧ್ಯಯನಕ್ಕೆ ಸಿಎಂ ಸೂಚನೆ
ರಾಜ್ಯದಲ್ಲಿ ಹಠಾತ್ ಸಾವಿನ ಪ್ರಕರಣಗಳು ಹೆಚ್ಚಿದ ಹಿನ್ನೆಲೆಯಲ್ಲಿ, ಅದರ ಕಾರಣಗಳ ಕುರಿತು ತಜ್ಞರ ಸಮಿತಿ ರಚಿಸಲು ಸಿಎಂ ಸಿದ್ದರಾಮಯ್ಯ ಸೂಚನೆ. ಕೋವಿಡ್ ಮತ್ತು ಲಸಿಕೆಯ ಪರಿಣಾಮಗಳ ಕುರಿತು ಸಮಗ್ರ ಅಧ್ಯಯನ ನಡೆಯಲಿದೆ.
- ತಜ್ಞರ ಸಮಿತಿ ರಚನೆಗೆ ಸಿಎಂ ಸೂಚನೆ
- ಹಠಾತ್ ಸಾವುಗಳ ಹಿಂದಿನ ಕಾರಣಗಳ ಅಧ್ಯಯನ
- ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಸರ್ಕಾರದ ನಿರ್ಧಾರ
ಬೆಂಗಳೂರು (Bengaluru): ರಾಜ್ಯದಲ್ಲಿ ಹಠಾತ್ ಸಾವಿನ ಪ್ರಕರಣಗಳು ಹೆಚ್ಚುತ್ತಿರುವ ಕುರಿತು ಗಮನ ಹರಿಸಲು, ಮುಖ್ಯ ಕಾರ್ಯದರ್ಶಿಗೆ ತಜ್ಞರ ಸಮಿತಿ ರಚಿಸುವಂತೆ ಸಿಎಂ ಸಿದ್ದರಾಮಯ್ಯ (CM Siddaramaiah) ಸೂಚಿಸಿದ್ದಾರೆ. ಈ ಸಮಿತಿಯು ಹೃದಯಾಘಾತ, ಹೃದಯಸ್ತಂಭನ, ಮತ್ತು ಮೆದುಳು ಸಂಬಂಧಿ ಸಮಸ್ಯೆಗಳ ಬಗ್ಗೆ ಅಧ್ಯಯನ ನಡೆಸಲಿದೆ.
ಹಿರಿಯ ಪತ್ರಕರ್ತರೊಬ್ಬರು ಇತ್ತೀಚೆಗೆ ಈ ವಿಷಯದ ಬಗ್ಗೆ ಸಿಎಂಗೆ ಇ-ಮೇಲ್ ಮೂಲಕ ಮಾಹಿತಿ ನೀಡಿದ್ದಾರೆ. ಅನೇಕ ಯುವಕರು ಅನಿರೀಕ್ಷಿತವಾಗಿ ಸಾವಿಗೀಡಾಗುತ್ತಿರುವುದು ಮಾಧ್ಯಮಗಳಲ್ಲಿ ವರದಿಯಾಗಿದ್ದು, ಇದರ ಪರಿಣಾಮವಾಗಿ ಕುಟುಂಬಗಳು ಆರ್ಥಿಕ ಹಾಗೂ ಸಾಮಾಜಿಕ ಸಮಸ್ಯೆಗಳನ್ನು ಎದುರಿಸುತ್ತಿವೆ.
ಸಾರ್ವಜನಿಕ ವಲಯದಲ್ಲಿ, ಈ ಸಾವುಗಳು ಕೋವಿಡ್ (Covid) ಅಥವಾ ಲಸಿಕೆಯ ಅಡ್ಡ ಪರಿಣಾಮವೇ ಇರಬಹುದೆಂಬ ಚರ್ಚೆ ನಡೆಯುತ್ತಿದೆ. ಈ ಹಿನ್ನೆಲೆ, ಸರ್ಕಾರವು ಈ ಬಗ್ಗೆ ಸಂಪೂರ್ಣ ಅಧ್ಯಯನ ನಡೆಸಿ, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ತೀರ್ಮಾನಿಸಿದೆ.
ಈ ನಿಟ್ಟಿನಲ್ಲಿ, ತಜ್ಞರ ಸಮಿತಿ ಸಮಗ್ರ ವರದಿ ಸಲ್ಲಿಸಿದ ಬಳಿಕ, ಸರ್ಕಾರ ಸೂಕ್ತ ನಿರ್ಧಾರಗಳನ್ನು ಕೈಗೊಂಡು ಮುನ್ನೆಚ್ಚರಿಕಾ ಕ್ರಮಗಳನ್ನು ಅನುಷ್ಠಾನಗೊಳಿಸಲಿದೆ.
Study on Sudden Deaths Post-COVID
Our Whatsapp Channel is Live Now 👇