ಬೆಂಗಳೂರು: ಡಿವೈಡರ್‌ಗೆ ಡಿಕ್ಕಿ ಹೊಡೆದು ಮರಕ್ಕೆ ಅಪ್ಪಳಿಸಿದ ಬೈಕ್: ಸಾಫ್ಟ್‌ವೇರ್ ಉದ್ಯೋಗಿ ಸಾವು

ಬೆಂಗಳೂರಿನ ಯಲಹಂಕದಲ್ಲಿ ಮುಂಜಾನೆ ಬೈಕ್‌ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಮರಕ್ಕೆ ಅಪ್ಪಳಿಸಿದೆ. ಅಪಘಾತದಲ್ಲಿ 37 ವರ್ಷದ ಟೆಕಿ ಪುನೀತ್ ಯಾದವ ಮೃತಪಟ್ಟಿದ್ದು, ಅವರ ಜೊತೆಗಿದ್ದ ಯುವತಿ ಕೂಡ ಕೆಳಗೆ ಬಿದ್ದಿದ್ದಾರೆ.

ಬೆಂಗಳೂರು (Bengaluru): ಸ್ನೇಹಿತೆಯ ಜೊತೆ ಬೈಕ್‌ನಲ್ಲಿ ತೆರಳುತ್ತಿದ್ದ ಟೆಕ್ಕಿಯೊಬ್ಬರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಯಲಹಂಕ (Yelahanka) ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ಮುಂಜಾನೆ ನಡೆದಿದೆ.

ಮೃತರನ್ನು ಹೆಬ್ಬಾಳದ ಕೆಂಪಾಪುರದ ವೆಂಕಟೇಗೌಡ ಲೇಔಟ್ ನಿವಾಸಿ ಪುನೀತ್ ಯಾದವ (37) ಎಂದು ಗುರುತಿಸಲಾಗಿದೆ. ಅವರು ಮಾನ್ಯತಾ ಟೆಕ್ ಪಾರ್ಕ್‌ನಲ್ಲಿರುವ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು.

ಗುರುವಾರ ಮುಂಜಾನೆ ಸುಮಾರು 1 ಗಂಟೆಯ ವೇಳೆಗೆ ಪುನೀತ್ ಯಾದವ ಅವರು ಪರಿಚಯಸ್ಥರಾದ ಸಿಂಧು ಯಾದವ (24) ಅವರನ್ನು ಬೈಕ್‌ನಲ್ಲಿ ಕರೆದುಕೊಂಡು ಹೋಗುತ್ತಿದ್ದರು. ಈ ವೇಳೆ ಸಂದೀಪ್ ಉನ್ನಿಕೃಷ್ಣನ್ ಮುಖ್ಯರಸ್ತೆಯ ಅರವಿಂದ ಬೆಲೆರ್ ಅಪಾರ್ಟ್‌ಮೆಂಟ್ ಸಮೀಪದ ತಿರುವಿನಲ್ಲಿ ಬೈಕ್‌ ನಿಯಂತ್ರಣ ತಪ್ಪಿದೆ ಎನ್ನಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಹೊಟ್ಟೆಗೆ ಹೊಡೆದು, ತಲೆಯನ್ನು ಗುದ್ದಿಸಿ ತಾಯಿಯನ್ನೇ ಕೊಂದ ಮಗ

ನಿಯಂತ್ರಣ ತಪ್ಪಿದ ಬೈಕ್‌ ಮೊದಲು ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದು, ಬಳಿಕ ಮರಕ್ಕೆ ಅಪ್ಪಳಿಸಿದೆ. ಡಿಕ್ಕಿಯ ರಭಸಕ್ಕೆ ಪುನೀತ್ ಯಾದವ ಮತ್ತು ಸಿಂಧು ಯಾದವ ಇಬ್ಬರೂ ರಸ್ತೆಗೆ ಬಿದ್ದಿದ್ದಾರೆ. ಈ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಪುನೀತ್ ಯಾದವ ಮೃತಪಟ್ಟಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

English Summary▼

ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories