ತುಮಕೂರು ರಸ್ತೆ ಅಪಘಾತದಲ್ಲಿ ತಾಯಿ-ಮಕ್ಕಳು ಸೇರಿದಂತೆ ಮೂವರ ಸಾವು

ತುಮಕೂರು ಜಿಲ್ಲೆಯ ಓಬಳಾಪುರ ಗ್ರಾಮದ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ದಾರುಣವಾಗಿ ಮೃತಪಟ್ಟಿದ್ದಾರೆ. ಈ ಘಟನೆ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

  • ತುಮಕೂರು ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವು.
  • ಬೈಕ್ ನಿಯಂತ್ರಣ ತಪ್ಪಿ ನಿಂತಿದ್ದ ಟ್ರ್ಯಾಕ್ಟರ್ ಟ್ರೇಲರ್‌ಗೆ ಡಿಕ್ಕಿ.
  • ಅಪಘಾತದಲ್ಲಿ ತಾಯಿ-ಮಕ್ಕಳು ಸೇರಿದಂತೆ ಮೂವರು ದಾರುಣ ಸಾವು

ತುಮಕೂರು (Tumakuru): ತುಮಕೂರು ಜಿಲ್ಲೆಯ ಓಬಳಾಪುರ ಗ್ರಾಮದ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ (Road Accident) ಒಂದೇ ಕುಟುಂಬದ ಮೂವರು ದಾರುಣವಾಗಿ ಮೃತಪಟ್ಟಿದ್ದಾರೆ. ಈ ಘಟನೆ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಮಧುಗಿರಿ ತಾಲೂಕಿನ ಗುಡ್ಡೆನಹಳ್ಳಿ ಗ್ರಾಮದ ನಿವಾಸಿಗಳೆಂದು ಗುರುತಿಸಲಾಗಿದೆ.

ಮಂಗಳವಾರ ಬೆಳಗಿನ ಜಾವ 6 ಗಂಟೆ ಸುಮಾರಿಗೆ, ಬೈಕ್‌ನಲ್ಲಿ (Bike) ಊರಿಗೆ ವಾಪಸ್ ಹೋಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಬೈಕ್‌ ಚಾಲಕನ ನಿಯಂತ್ರಣ ತಪ್ಪಿ, ರಸ್ತೆಯಲ್ಲಿ ನಿಂತಿದ್ದ ಟ್ರ್ಯಾಕ್ಟರ್ ಟ್ರೇಲರ್‌ಗೆ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲಿಯೇ ಪ್ರಾಣ ಕಳೆದುಕೊಂಡಿದ್ದಾರೆ.

ಮೃತ ದುರ್ದೈವಿಗಳನ್ನು ಮಹಮ್ಮದ್ ಆಸೀಫ್‌ (12), ಶಾಖಿರ್ ಹುಸೇನ್‌ (18), ಹಾಗೂ ಮಮ್ತಾಜ್‌ (38) ಎಂದು ಗುರುತಿಸಲಾಗಿದೆ. ಮಹಮ್ಮದ್ ಆಸೀಫ್ ಪಿಯುಸಿ ವ್ಯಾಸಂಗ ಮಾಡುತ್ತಿದ್ದನು, ಶಾಖಿರ್ ಹುಸೇನ್‌ 6ನೇ ತರಗತಿಯ ವಿದ್ಯಾರ್ಥಿ ಎಂದು ತಿಳಿದುಬಂದಿದೆ.

ತುಮಕೂರು ರಸ್ತೆ ಅಪಘಾತದಲ್ಲಿ ತಾಯಿ-ಮಕ್ಕಳು ಸೇರಿದಂತೆ ಮೂವರ ಸಾವು

ಅಪಘಾತದ ಬಗ್ಗೆ ಮಾಹಿತಿ ತಿಳಿದ ಕೂಡಲೇ ತುಮಕೂರು ಎಸ್‌ಪಿ ಅಶೋಕ್ ವೆಂಕಟ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರು ಶಿರಾ ಗೇಟ್‌ನಲ್ಲಿರುವ ಸಂಬಂಧಿಕರ ಮನೆಗೆ ಸೋಮವಾರ ಸಂಜೆ ಭೇಟಿಗೆ ತೆರಳಿದ್ದರು. ಮಂಗಳವಾರ ಬೆಳಿಗ್ಗೆ ಶಾಲೆ-ಕಾಲೇಜಿಗೆ ಹೋಗಬೇಕೆಂದು ಊರಿಗೆ ವಾಪಸ್ ಬರುತ್ತಿದ್ದಾಗ ದುರ್ಘಟನೆ ನಡೆದಿದೆ.

ತುಮಕೂರು ಕಡೆಯಿಂದ ಮಧುಗಿರಿ ಕಡೆಗೆ ಹೋಗುತ್ತಿದ್ದಾಗ ಬೈಕ್ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರೂ ಮೃತಪಟ್ಟಿರುವುದು ತಿಳಿದುಬಂದಿದೆ.

Three Members of a Family Die in a Tragic Accident Near Tumakuru

English Summary
Related Stories