ಕೋಲಾರ ಗಲ್ ಪೇಟೆ ಪೊಲೀಸರಿಂದ ಮೂವರು ಕಳ್ಳರ ಬಂಧನ
ಕೋಲಾರ (Kolar): ನಗರದಲ್ಲಿ ಕಳ್ಳತನ ಮಾಡುತ್ತಿದ್ದ ಮೂವರು ಕಳ್ಳರು ಸಿಕ್ಕಿಬಿದ್ದಿದ್ದಾರೆ. ಮುಳಬಾಗಿಲು ತಾಲೂಕಿನ ಹೆಬ್ಬಣಿ ಗ್ರಾಮದ ಅರುಣ್ ಕುಮಾರ್, ತಮಿಳುನಾಡಿನ ತಿರುಪತ್ತೂರು ಜಿಲ್ಲೆಯ ವಾಣಿಯಂಬಾಡಿಯ ಸುಹೇಲ್ ಮತ್ತು ಚಿತ್ತೂರು ಜಿಲ್ಲೆಯ ಪುಂಗನೂರು ಮಂಡಲದ ಕುರಪಳ್ಳಿ ಗ್ರಾಮದ ಭಾಸ್ಕರ್ ಎಂಬುವರನ್ನು ಗಲ್‌ಪೇಟೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳಿಂದ ರೂ. 5 ಲಕ್ಷ ಮೌಲ್ಯದ 75 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. ಪ್ರಕರಣದ ಸಕ್ರಿಯ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ ಪೊಲೀಸರನ್ನು ಜಿಲ್ಲಾ ಎಸ್ಪಿ ನಿಖಿಲ್ ಅಭಿನಂದಿಸಿದ್ದಾರೆ.
ಬಂಧಿತರು ವಿವಿಧ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ, ಕಳ್ಳರನ್ನು ಬಂಧಿಸಿರುವ ಪೊಲೀಸರು ಇನ್ನಷ್ಟು ವಿಚಾರಣೆ ನಡೆಸುತ್ತಿದ್ದಾರೆ.
Three thieves arrested by Kolar Galpet police



