ಬೆಂಗಳೂರು ಯಲಹಂಕದಲ್ಲಿ ಇಬ್ಬರು ಸೆಕ್ಯೂರಿಟಿ ಗಾರ್ಡ್ ಕೊಲೆ

ಬೆಂಗಳೂರಿನ ಯಲಹಂಕದಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಇಬ್ಬರನ್ನು ಕೊಲೆ ಮಾಡಲಾಗಿದೆ, ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

- - - - - - - - - - - - - Story - - - - - - - - - - - - -

ಬೆಂಗಳೂರು (Bengaluru): ಬೆಂಗಳೂರಿನ ಯಲಹಂಕದಲ್ಲಿ (Yelahanka) ಕಾರ್ಖಾನೆಯೊಂದರಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಇಬ್ಬರನ್ನು ಕೊಲೆ ಮಾಡಲಾಗಿದೆ. ನ್ಯೂಟೌನ್‌ನ ಬಯಲು ಬಸವೇಶ್ವರ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ.

ನೇಪಾಳದ ವಿಕ್ರಮ್ (21) ಮತ್ತು ಸೂರಿ (33) ಇತ್ತೀಚೆಗೆ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸಕ್ಕೆ ಸೇರಿದ್ದರು. ಭಾನುವಾರ ರಾತ್ರಿ 7 ಗಂಟೆ ಸುಮಾರಿಗೆ ತಮ್ಮ ಪರಿಚಯಸ್ಥರೊಂದಿಗೆ ಮದ್ಯಪಾನ ಮಾಡಿದ್ದಾರೆ.

ಬೆಂಗಳೂರು ವ್ಯಕ್ತಿ 40 ಪುಟಗಳ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

ಬೆಂಗಳೂರು ಯಲಹಂಕದಲ್ಲಿ ಇಬ್ಬರು ಸೆಕ್ಯೂರಿಟಿ ಗಾರ್ಡ್ ಕೊಲೆ

ಕುಡಿದ ಅಮಲಿನಲ್ಲಿ ಸ್ನೇಹಿತರ ನಡುವೆ ಜಗಳ ನಡೆದಿರುವ ಶಂಕೆ ವ್ಯಕ್ತವಾಗಿದೆ. ವಿಕ್ರಮ್ ಮತ್ತು ಸೂರಿ ಎಂಬುವರನ್ನು ಕಬ್ಬಿಣದ ರಾಡ್‌ಗಳಿಂದ ಹತ್ಯೆ ಮಾಡಲಾಗಿದೆ. ಅಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಕೆಲ ಮಾಹಿತಿಗಳು ಪತ್ತೆಯಾಗಿವೆ.

ಘಟನಾ ಸ್ಥಳದಲ್ಲಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈಗಾಗಲೇ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

Two Security Guards Murdered Near Bengaluru Yelahanka Factory

Related Stories