ಬೆಂಗಳೂರಿನ 3 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ, ಇಬ್ಬರು ಸಾವು
ಬೆಂಗಳೂರು ಉತ್ತರ ಭಾಗದ ಸೀಗೆಹಳ್ಳಿ ಗೇಟ್ ಬಳಿ ನಿರ್ಮಾಣ ಹಂತದಲ್ಲಿ ಬೆಂಕಿ ಅವಘಡದಿಂದ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ.
- 3 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಹತ್ತಿದ ಘಟನೆ.
- ಬೆಂಕಿ ಅವಘಡದಲ್ಲಿ ಇಬ್ಬರು ಕಾರ್ಮಿಕರು ಸಾವು
- ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿ, ಪೊಲೀಸರಿಂದ ಪರಿಶೀಲನೆ
Bengaluru : ಬೆಂಗಳೂರು ಉತ್ತರ ತಾಲೂಕಿನ ನೆಲಮಂಗಲ ಪ್ರದೇಶದಲ್ಲಿ ಸೀಗೆಹಳ್ಳಿ ಗೇಟ್ ಬಳಿ ನಿರ್ಮಾಣ ಹಂತದಲ್ಲಿದ್ದ 3 ಅಂತಸ್ತಿನ ಕಟ್ಟಡದಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದೆ.
ಈ ಅವಘಡದಲ್ಲಿ, ಉತ್ತರ ಪ್ರದೇಶದ ಉದಯ್ ಭಾನು (40) ಮತ್ತು ಬಿಹಾರ ಮೂಲದ ರೋಷನ್ (23) ಎಂಬ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ಕಟ್ಟಡವು ಗುತ್ತಿಗೆದಾರ ಸತೀಶ್ ಮತ್ತು ಇಂಜಿನಿಯರ್‌ರ ಕುಟುಂಬಕ್ಕೆ ಸೇರಿದ್ದು ಎನ್ನಲಾಗಿದೆ. ತಾತ್ಕಾಲಿಕವಾಗಿ ವಿದ್ಯುತ್ ಸಂಪರ್ಕವನ್ನು ಬಳಸಿಕೊಂಡು ವುಡ್ ವರ್ಕ್ಸ್ ಕೆಲಸ ನಡೆಸಲಾಗುತ್ತಿತ್ತು.
ಬೆಂಕಿ ಹತ್ತಲು ನಿಖರವಾದ ಕಾರಣ ಇನ್ನಷ್ಟೇ ತಿಳಿಯಬೇಕಿದೆ, ಘಟನೆ ಬಳಿಕ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.
ಬೆಂಗಳೂರು ಗ್ರಾಮಾಂತರ ಹೊಸಕೋಟೆಯಲ್ಲಿ ಪತ್ನಿಯ ಕತ್ತು ಹಿಸುಕಿ ಹತ್ಯೆ, ಪೊಲೀಸರಿಗೆ ಶರಣು
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮಾದನಾಯಕನಹಳ್ಳಿ ಪೋಲೀಸರು ಪರಿಶೀಲನೆ ನಡೆಸಿದ್ದಾರೆ. ಮೃತ ದೇಹಗಳನ್ನು ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ.
Two Workers Killed in Construction Site Fire in Bengaluru
Our Whatsapp Channel is Live Now 👇