ಬೆಂಗಳೂರು ಗ್ರಾಮಾಂತರ: ಗ್ರಾಪಂ ಚುನಾವಣೆಯಲ್ಲಿ 64 ಸ್ಥಾನಗಳಿಗೆ ಅವಿರೋಧ ಆಯ್ಕೆ

ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ಹಿನ್ನೆಲೆ, ಮೊದಲ ಹಂತದ ಗ್ರಾಮ ಪಂಚಾಯಿತಿಯ ಚುನಾವಣೆಯ ನಾಮಪತ್ರ ಸಲ್ಲಿಕೆಯು ಕೊನೆಯಾಗಿದ್ದು (ಡಿ. 7 ರಿಂದ 11 ರವರೆಗೆ) ಹೊಸಕೋಟೆ ಹಾಗೂ ನೆಲಮಂಗಲ ತಾಲ್ಲೂಕಿನ ಒಟ್ಟು 47 ಗ್ರಾಮ ಪಂಚಾಯತಿಯ 856 ಸ್ಥಾನಗಳಲ್ಲಿ ನೆಲಮಂಗಲದ 21 ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆಯಾಗದೆ ಖಾಲಿ ಉಳಿದಿವೆ.

(Kannada News) : ಬೆಂಗಳೂರು ಗ್ರಾಮಾಂತರ: ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ಹಿನ್ನೆಲೆ, ಮೊದಲ ಹಂತದ ಗ್ರಾಮ ಪಂಚಾಯಿತಿಯ ಚುನಾವಣೆಯ ನಾಮಪತ್ರ ಸಲ್ಲಿಕೆಯು ಕೊನೆಯಾಗಿದ್ದು (ಡಿ. 7 ರಿಂದ 11 ರವರೆಗೆ) ಹೊಸಕೋಟೆ ಹಾಗೂ ನೆಲಮಂಗಲ ತಾಲ್ಲೂಕಿನ ಒಟ್ಟು 47 ಗ್ರಾಮ ಪಂಚಾಯತಿಯ 856 ಸ್ಥಾನಗಳಲ್ಲಿ ನೆಲಮಂಗಲದ 21 ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆಯಾಗದೆ ಖಾಲಿ ಉಳಿದಿವೆ.

ಸಲ್ಲಿಕೆಯಾಗಿರುವ ಒಟ್ಟು 3267 ನಾಮಪತ್ರಗಳ ಪೈಕಿ 44 ನಾಮಪತ್ರಗಳು ತಿರಸ್ಕೃತಗೊಂಡಿದ್ದು, 64 ಸದಸ್ಯರ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಹಾಗೂ 771 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಹೊಸಕೋಟೆ ತಾಲೂಕಿನ 26 ಗ್ರಾಮ ಪಂಚಾಯಿತಿಗಳ 494 ಸ್ಥಾನಗಳಿಗೆ ಸಲ್ಲಿಕೆಯಾಗಿರುವ ಒಟ್ಟು 1848 ನಾಮಪತ್ರಗಳ ಪೈಕಿ 23 ನಾಮಪತ್ರಗಳು ತಿರಸ್ಕೃತಗೊಂಡಿದ್ದು, 43 ಸದಸ್ಯರ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಹಾಗೂ 451 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ನೆಲಮಂಗಲ ತಾಲ್ಲೂಕಿನ 21 ಗ್ರಾಮ ಪಂಚಾಯಿತಿಗಳ 362 ಸ್ಥಾನಗಳಿಗೆ ಸಲ್ಲಿಕೆಯಾಗಿರುವ ಒಟ್ಟು 1419 ನಾಮಪತ್ರಗಳ ಪೈಕಿ 21 ನಾಮಪತ್ರಗಳು ತಿರಸ್ಕೃತಗೊಂಡಿದ್ದು, 21 ಸದಸ್ಯರ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಹಾಗೂ 320 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

21 ಸ್ಥಾನಗಳಿಗೆ ಯಾವುದೇ ನಾಮ ಪತ್ರ ಸಲ್ಲಿಕೆಯಾಗದೆ ಖಾಲಿ ಉಳಿದಿವೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದ್ದಾರೆ.

Web Title : selection for 64 seats in Gram Panchayat elections