ಬೆಂಗಳೂರು ನಿರ್ಮಾಣ ಹಂತದ ಕಟ್ಟಡ ಕುಸಿತ, ಮೂವರು ಕಾರ್ಮಿಕರ ಸಾವು
ಬೆಂಗಳೂರಿನಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿದು ಬಿದ್ದಿದೆ. ಕಾರ್ಮಿಕರು ಕೆಲಸ ಮಾಡುತ್ತಿರುವಾಗಲೇ ಕಟ್ಟಡ ಕುಸಿದಿದೆ. ಇದರಿಂದ ಹಲವು ಕಾರ್ಮಿಕರು ಕಟ್ಟಡದ ಅವಶೇಷಗಳಡಿ ಸಿಲುಕಿದ್ದಾರೆ.
ಬೆಂಗಳೂರು (Bengaluru): ಬೆಂಗಳೂರಿನಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿದು (building collapses) ಬಿದ್ದಿದೆ. ಹೆಣ್ಣೂರು ಸಮೀಪದ ಬಾಬುಸಾಬ್ಪಾಳ್ಯದಲ್ಲಿ (Babusapalya) ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದಿದೆ. ಕಾರ್ಮಿಕರು ಕೆಲಸ ಮಾಡುತ್ತಿರುವಾಗಲೇ ಕಟ್ಟಡ ಕುಸಿದಿದೆ. ಇದರಿಂದ ಹಲವು ಕಾರ್ಮಿಕರು ಕಟ್ಟಡದ ಅವಶೇಷಗಳಡಿ ಸಿಲುಕಿದ್ದಾರೆ. ಬೆಂಗಳೂರಿನ ಹೊರಮಾವು ಅಗರ ಪ್ರದೇಶದಲ್ಲಿ ಈ ದುರ್ಘಟನೆ ನಡೆದಿದೆ.
ಕಟ್ಟಡ ಕುಸಿದು ಬಿದ್ದ ತಕ್ಷಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು, ಸ್ಥಳೀಯ ಅಧಿಕಾರಿಗಳು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿವೆ.
ಸಂತ್ರಸ್ತರನ್ನು ರಕ್ಷಿಸಲು ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅವಶೇಷಗಳನ್ನು ತೆಗೆದು ಸಂತ್ರಸ್ತರನ್ನು ಹೊರತರಲು ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ. ಘಟನೆಯ ಕುರಿತು ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿಯಬೇಕಿದೆ. ಇನ್ನು ಕಟ್ಟಡ ಅವಶೇಷಗಳಡಿ 16 ಕಾರ್ಮಿಕರು ಸಿಲುಕಿರಬಹುದು ಎನ್ನಲಾಗಿದೆ.
ಸದ್ಯ ಅಗ್ನಿಶಾಮಕ ದಳ, ಪೊಲೀಸರು ಅವಶೇಷಗಳಡಿ ಸಿಲುಕಿದ್ದ ಮೂವರು ಕಾರ್ಮಿಕರ ಶವ ಹೊರತೆಗೆದಿದ್ದಾರೆ. ಇನ್ನು ಮೂವರನ್ನು ರಕ್ಷಣೆ ಮಾಡಲಾಗಿದ್ದು, ಇನ್ನುಳಿದಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ಈ ಕಾರ್ಮಿಕರು ಮಳೆಯ ನಡುವೆಯೂ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಇನ್ನು ಬೆಂಗಳೂರಿನಲ್ಲಿ ಭಾರಿ ಪ್ರಮಾಣದ ಮಳೆಯಾಗುತ್ತಿದ್ದು, ಹಲವು ಪ್ರದೇಶಗಳಲ್ಲಿ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ. ಅಲ್ಲದೆ ಅಲ್ಲಲ್ಲಿ ದುರ್ಘಟನೆಗಳು ಕೂಡ ಸಂಭವಿಸುತ್ತಿದ್ದು, ಜನರು ಆತಂಕಗೊಂಡಿದ್ದಾರೆ.
Under construction building collapses in Bengaluru Over Heavy Rain