ಬೆಂಗಳೂರು ವಿವಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ
ಬೆಂಗಳೂರು ವಿಶ್ವವಿದ್ಯಾಲಯದ (University) ಹಾಸ್ಟೆಲ್‌ನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೆತ್ ನೋಟ್ (Death Note) ಬರೆದಿಟ್ಟು ಜೀವನ ಅಂತ್ಯ ಮಾಡಿಕೊಂಡಿದ್ದಾರೆ. ಪ್ರಕರಣ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
- ಹಾಸ್ಟೆಲ್‌ನಲ್ಲೇ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ
- ಡೆತ್ ನೋಟ್‌ನಲ್ಲಿ ಕುಟುಂಬಕ್ಕೆ ಕ್ಷಮೆ ಯಾಚನೆ
- ಪ್ರಕರಣ ದಾಖಲಿಸಿ ಪೊಲೀಸರಿಂದ ಮುಂದುವರಿದ ತನಿಖೆ
ಬೆಂಗಳೂರು (Bengaluru): ಬೆಂಗಳೂರು ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿನಿಯೊಬ್ಬರು ಸೋಮವಾರ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಘಟನೆಯ ವಿವರ ಬೆಳಕಿಗೆ ಬಂದ ತಕ್ಷಣ ಸ್ಥಳೀಯ ಪೊಲೀಸರು (Police) ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಎಚ್.ಎನ್. ಪಾವನ, ಕನ್ನಡ ವಿಭಾಗದಲ್ಲಿ ಎಂಎ ದ್ವಿತೀಯ ವರ್ಷ ಓದುತ್ತಿದ್ದರು. ಮಧ್ಯಾಹ್ನ 12 ಗಂಟೆ ಸಮಯದಲ್ಲಿ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಹಾಸ್ಟೆಲ್‌ನಲ್ಲಿ ಉಳಿದ ವಿದ್ಯಾರ್ಥಿಗಳು ತಕ್ಷಣ ಮಾಹಿತಿ ನೀಡಿದ್ದು, ಆ ಬಳಿಕ ಈ ಘಟನೆಯ ಬಗ್ಗೆ ಅಧಿಕಾರಿಗಳಿಗೆ ತಿಳಿದುಬಂದಿದೆ.
ಮೂಲಗಳ ಪ್ರಕಾರ, ಪಾವನ ಅವರ ಡೆತ್ ನೋಟ್‌ನಲ್ಲಿ “ನಾನು ಗೆಳೆಯನನ್ನು ನಂಬಿದ್ದೆ, ಆದರೆ ಮೋಸವಾಗಿದೆ. ಅಪ್ಪ, ಅಮ್ಮ ಕ್ಷಮಿಸಿ. ಐ ಲವ್ ಯೂ” ಎಂಬ ಸಂದೇಶ ಬರೆದಿರುವುದು ಪತ್ತೆಯಾಗಿದೆ. ಈ ಕಾರಣದಿಂದ ಅವರ ಆತ್ಮಹತ್ಯೆಗೆ ವೈಯಕ್ತಿಕ ಕಾರಣಗಳೇ ಕಾರಣ ಎಂಬ ಅನುಮಾನ ಮೂಡಿಸಿದೆ.
ಈ ಘಟನೆಯ ಬಳಿಕ ಪಾವನ ಅವರ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ (Hospital) ಮರಣೋತ್ತರ ಪರೀಕ್ಷೆಗಾಗಿ ಸಾಗಿಸಲಾಗಿದೆ. ಪೋಷಕರು ಆಗಮಿಸಿದ ಬಳಿಕ ಮುಂದಿನ ಪ್ರಕ್ರಿಯೆ ಕೈಗೊಳ್ಳಲಾಗುವುದು.
ಈ ಕುರಿತು ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.
University Student Ends Life in Hostel