ಬೆಂಗಳೂರಿನಲ್ಲಿ ವಾಟರ್ ಟ್ಯಾಂಕರ್ ಮಾಫಿಯಾ; ಹೆಚ್.ಡಿ.ದೇವೇಗೌಡ

ಬೆಂಗಳೂರು ನಗರವು ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ, ದೇಶದ ಎಲ್ಲಾ ರಾಜ್ಯಗಳ ಜನರು ಉದ್ಯೋಗಕ್ಕಾಗಿ ಇಲ್ಲಿಗೆ ಬರುತ್ತಿದ್ದಾರೆ, ಎಲ್ಲರಿಗೂ ಆಶ್ರಯ ನೀಡುವ ಉದ್ಯಾನನಗರಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ತುಂಬಾ ಗಂಭೀರವಾಗಿದೆ

- - - - - - - - - - - - - Story - - - - - - - - - - - - -

Bengaluru : ಬೆಂಗಳೂರಿನಲ್ಲಿ ನೀರಿನ ಕೊರತೆಯಿಂದ ಜನರು ತೀವ್ರ ಹಾಹಾಕಾರ ಅನುಭವಿಸುತ್ತಿದ್ದು, ಟ್ಯಾಂಕರ್ (Water Tanker) ಮಾಫಿಯಾ ಜನರನ್ನು ಶೋಷಿಸುತ್ತಿದೆ ಎಂದು ಮಾಜಿ ಪ್ರಧಾನಿ ಮತ್ತು ಜೆಡಿಎಸ್ ನಾಯಕ ಹೆಚ್.ಡಿ.ದೇವೇಗೌಡ (HD Deve Gowda) ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಗುರುವಾರ ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಸಿಲಿಕಾನ್ ಸಿಟಿಯಲ್ಲಿ ನೀರಿನ ಸಮಸ್ಯೆ ಕುರಿತಂತೆ ಚರ್ಚೆ ನಡೆಸಿದರು. ಐಟಿ ನಗರ ಬೆಂಗಳೂರು ಎದುರಿಸುತ್ತಿರುವ ಸಮಸ್ಯೆ ಮೇಲೆ ಕೇಂದ್ರ ಸರ್ಕಾರ ಗಮನ ಹರಿಸಬೇಕೆಂದು ಒತ್ತಾಯಿಸಿದರು.

ನೀರಿನ ಸಮಸ್ಯೆಯನ್ನು ನಿವಾರಿಸಲು ಮೇಕೆದಾಟು ಯೋಜನೆಗೆ ಅನುಮೋದನೆ ಪಡೆಯಲು, ಎಲ್ಲ ರಾಜಕೀಯ ಪಕ್ಷಗಳು ಸಹಕರಿಸಬೇಕೆಂದು ಮನವಿ ಮಾಡಿದರು. ರಾಜ್ಯದಲ್ಲಿ ಆಡಳಿತ ನಡೆಸಿದ ಎಲ್ಲ ಸರಕಾರಗಳು ಮೇಕೆದಾಟು ಯೋಜನೆಗೆ ಶ್ರಮಿಸಿವೆ ಎಂದರು.

ಬೆಂಗಳೂರಿನಲ್ಲಿ ವಾಟರ್ ಟ್ಯಾಂಕರ್ ಮಾಫಿಯಾ; ಹೆಚ್.ಡಿ.ದೇವೇಗೌಡ

ಅನುಮತಿ ನೀಡುವಂತೆ ಕರ್ನಾಟಕ ಸರ್ಕಾರದಿಂದ (Karnataka Government) ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಆದಷ್ಟು ಬೇಗ ಅನುಮೋದನೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದರು.

ಬೆಂಗಳೂರು ನಗರವು ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ, ದೇಶದ ಎಲ್ಲಾ ರಾಜ್ಯಗಳ ಜನರು ಉದ್ಯೋಗಕ್ಕಾಗಿ ಇಲ್ಲಿಗೆ ಬರುತ್ತಿದ್ದಾರೆ, ಎಲ್ಲರಿಗೂ ಆಶ್ರಯ ನೀಡುವ ಉದ್ಯಾನನಗರಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ತುಂಬಾ ಗಂಭೀರವಾಗಿದೆ ಎಂದು ಹೇಳಿದರು. ಟ್ಯಾಂಕರ್ ಮಾಫಿಯಾ ನೀರನ್ನೇ ಅಸ್ತ್ರವನ್ನಾಗಿ ಮಾಡಿಕೊಂಡು ಜನರನ್ನು ಸುಲಿಗೆ ಮಾಡುತ್ತಿದೆ ಎಂದರು.

Water Crisis in Bengaluru: HD Deve Gowda Urges Central Approval for Mekedatu Project

Related Stories