ಗ್ರಾಮಕ್ಕೆ ಮೂಲ ಸೌಕರ್ಯ ಕಲ್ಪಿಸಿಕೊಡುವಂತೆ ಸಭಾಧ್ಯಕ್ಷರಿಗೆ ರಕ್ತದಲ್ಲಿ ಪತ್ರ ಬರೆದ ರೈತಸಂಘದ ಮುಖಂಡ

ಗ್ರಾಮಕ್ಕೆ ಮೂಲ ಸೌಕರ್ಯ ಕಲ್ಪಿಸುವಂತೆ ರೈತ ಸಂಘದ ಅಧ್ಯಕ್ಷರು ಸಭಾಧ್ಯಕ್ಷರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.

ಕಲಬುರಗಿ: ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ರಥಕಲ್ ಎಂಬ ಗ್ರಾಮವಿದೆ. ಗ್ರಾಮದಲ್ಲಿ ಹಲವು ವರ್ಷಗಳಿಂದ ಕುಡಿಯುವ ನೀರು, ರಸ್ತೆ, ಶೌಚಾಲಯ ಸೇರಿದಂತೆ ಯಾವುದೇ ಮೂಲ ಸೌಕರ್ಯಗಳಿಲ್ಲ. ತಮ್ಮ ಗ್ರಾಮಕ್ಕೆ ಮೂಲ ಸೌಕರ್ಯ ಕಲ್ಪಿಸಿಕೊಡುವಂತೆ ಗ್ರಾಮಸ್ಥರು ಹಲವು ಬಾರಿ ಒತ್ತಾಯಿಸಿದರೂ ಯಾವೊಬ್ಬ ಜನಪ್ರತಿನಿಧಿ, ಅಧಿಕಾರಿಗಳು ಕಂಡಿಲ್ಲ ಎನ್ನಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಮೂಲ ಸೌಕರ್ಯ ಕಲ್ಪಿಸಲು ಕ್ರಮಕೈಗೊಳ್ಳುವಂತೆ ರಥಕಲ್ ಗ್ರಾಮದ ಕಾಳಗಿ ತಾಲೂಕಾ ರೈತ ಸಂಘದ ಮುಖಂಡ ಶರಣಬಸಪ್ಪ ಕರ್ನಾಟಕ ವಿಧಾನಸಭಾಧ್ಯಕ್ಷರಿಗೆ ಪತ್ರ ಬರೆದಿದ್ದಾರೆ. . ಅದರಲ್ಲಿ ತಮ್ಮ ಊರಿನ ದುಸ್ಥಿತಿಯನ್ನು ಪ್ರಸ್ತಾಪಿಸಿ ಕೂಡಲೇ ಮೂಲ ಸೌಕರ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಅವರು ರಕ್ತದಲ್ಲಿ ಬರೆದ ಪತ್ರ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

wrote a letter in blood to the Speaker asking for basic facilities for the village

Follow Us on : Google News | Facebook | Twitter | YouTube