ಸೆ.೪ ರಂದು ಡಿ.ಸಿ.ಎಂ. ಗೋವಿಂದ ಕಾರಜೋಳ ಅವರ ಜಿಲ್ಲಾ ಪ್ರವಾಸ

ಬೆಳಗಾವಿ : ಉಪಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ,ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಗೋವಿಂದ ಕಾರಜೋಳ ಅವರು ಸೆಪ್ಟೆಂಬರ್ ೪ ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಸೆ.೪ (ಶುಕ್ರವಾರ) ಸುವರ್ಣವಿಧಾನಸೌಧದಲ್ಲಿ ಮಧ್ಯಾಹ್ನ ೩.೩೦ಕ್ಕೆ ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಇಲಾಖೆಯ ವಲಯ ಮಟ್ಟದ ಯೋಜನೆಗಳ ಬಗ್ಗೆ ಮತ್ತು ಪ್ರವಾಹ ಹಾನಿ ತಡೆಗಟ್ಟುವ ಕುರಿತು ತುರ್ತು ಕೈಗೊಳ್ಳಬೇಕಾದ ಕ್ರಮದ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ಸೆ.೫ ರಂದು (ಶನಿವಾರ) ಬೆಳಗ್ಗೆ ೮ ಗಂಟೆಗೆ ಬೆಳಗಾವಿಯಿಂದ ಬಾಗಲಕೋಟೆಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

For Breaking News & Live News Updates, Like Us on Facebook, Twitter. Read More Latest Kannada News Live Alerts on kannadanews.today News Portal.

This website uses cookies to improve your experience. We'll assume you're ok with this, but you can opt-out if you wish. Accept Read More