ಬೆಳಗಾವಿ ಕ್ಷೇತ್ರದಲ್ಲಿನ ಸಮಸ್ಯೆಗಳ ಕುರಿತು ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಶಾಸಕ ಅನಿಲ ಬೆನಕೆ

ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ರವರು ಮಹಾನಗರ ಪಾಲಿಕೆಯ ಶಾಸಕರ ಕಾರ್ಯಾಲಯದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಮತಕ್ಷೇತ್ರದಲ್ಲಿನ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಸಭೆಯನ್ನು ನಡೆಸಿದರು.

ಬೆಳಗಾವಿ ಕ್ಷೇತ್ರದಲ್ಲಿನ ಸಮಸ್ಯೆಗಳ ಕುರಿತು ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಶಾಸಕ ಅನಿಲ ಬೆನಕೆ

(Kannada News) : ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ರವರು ಮಹಾನಗರ ಪಾಲಿಕೆಯ ಶಾಸಕರ ಕಾರ್ಯಾಲಯದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಮತಕ್ಷೇತ್ರದಲ್ಲಿನ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಸಭೆಯನ್ನು ನಡೆಸಿದರು.

ಈ ಸಂದರ್ಭದಲ್ಲಿ ಅಧಿಕರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಶಾಸಕರು ಸಾಮಾಜಿಕ ಜಾಲತಾಣ ಹಾಗೂ ಕ್ಷೇತ್ರದಲ್ಲಿ ಸಂಚರಿಸುವ ಸಂದರ್ಭದಲ್ಲಿ ಸಾರ್ವಜನಿಕರಿಂದ ಬಂದಂತಹ ದೂರುಗಳನ್ವಯ ಮಹಾನಗರ ಪಾಲಿಕೆ, ಜಲಮಂಡಳಿ ಹಾಗೂ ಸ್ಮಾರ್ಟ ಸಿಟಿ ಅಧಿಕಾರಿಗಳ ಸಭೆ ನಡೆಸಲಾಗಿದೆ ಎಂದರು.

ಕ್ಷೇತ್ರದಲ್ಲಿನ ಕುಡಿಯುವ ನೀರು, ಬೀದಿ ದೀಪ, ಚರಂಡಿ ಹಾಗೂ ರಸ್ತೆಯಲ್ಲಿನ ತಗ್ಗು ಗುಂಡಿಗಳು ಸೇರಿದಂತೆ ಮೂಲಭೂತ ಸೌಕರ್ಯಗಳಿಗೆ ಸಂಬಂಧಿಸಿದಂತೆ ತ್ವರಿತವಾಗಿ ಎಲ್ಲ ಸಮಸ್ಯೆಗಳು ಬಗೆಹರಿಸಬೇಕೆಂದು ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಿದರು.

ಬೇಸಿಗೆ ಕಾಲ ಬರುವುದೊರಳಗಾಗಿ ಕ್ಷೇತ್ರದಲ್ಲಿ ಎಲ್ಲ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಿ, ಕ್ಷೇತ್ರದಲ್ಲಿ ನೀರಿನ ಪೈಪಲೈನ ಸೋರಿಕೆಯನ್ನು ತಡೆಗಟ್ಟಬೇಕು ಅದರ ಜೊತೆಗೆ ಕೊಳವೆ ಬಾವಿಗಳ ದುರಸ್ಥಿ ಮಾಡಬೇಕು ಎಂದು ಜಲಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಳಗಾವಿ ಉತ್ತರ ಮತಕ್ಷೇತ್ರದಲ್ಲಿನ ರಸ್ತೆಯಲ್ಲಿ ತಗ್ಗು ಬಿದ್ದಿದ್ದು, ಅವುಗಳನ್ನು ಸ್ಮಾರ್ಟ ಸಿಟಿ ಅಧಿಕಾರಿಗಳೊಂದಿಗೆ ಸಹಕರಿಸಿ 10 ದಿನಗಳ ಒಳಗಾಗಿ ರಸ್ತೆಯಲ್ಲಿ ತಗ್ಗು ಗುಂಡಿಗಳನ್ನು ಮುಚ್ಚುವಂತೆ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕ್ಷೇತ್ರದಲ್ಲಿ ಬೀದಿ ದೀಪಗಳ ಅಳವಡಿಕೆಯಲ್ಲಿ ಅಪಾರ ಪ್ರಮಾಣದಲ್ಲಿ ಸಮಸ್ಯೆ ಕಂಡುಬಂದಿದ್ದು, ಆದಷ್ಟು ಬೇಗನೆ ಬೀದೀ ದೀಪಗಳ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಮಹಾನಗರ ಪಾಲಿಕೆ ಹಾಗೂ ಸ್ಮಾರ್ಟ ಸಿಟಿ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಈ ಸಂದರ್ಭದಲ್ಲಿ ಶಾಸಕ ಅನಿಲ ಬೆನಕೆ, ಮಹಾನಗರ ಪಾಲಿಕೆಯ ಅಧಿಕಾರಿಗಳು, ಜಲಮಂಡಳಿ ಅಧಿಕಾರಿಗಳು, ಸ್ಮಾರ್ಟ ಸಿಟಿ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಶಾಸಕರ ಆಪ್ತ ಸಹಾಯಕ ವಿ. ಎಮ್. ಪತ್ತಾರ ಉಪಸ್ಥಿತರಿದ್ದರು.

Web Title : MLA Anila Benake held a meeting with authorities on issues in the Belgaum sector.

Scroll Down To More News Today