Kannada News - Kannadigas Adda

Welcome To Kannada News - Kannadigas Adda

ಬಳ್ಳಾರಿ : ಗಂಗಾಕಲ್ಯಾಣ ಯೋಜನೆ – ಅರ್ಜಿ ಆಹ್ವಾನ

Kannadanews.today - ಕನ್ನಡಿಗಾಸ್ ಅಡ್ಡ

ಬಳ್ಳಾರಿ : ಗಂಗಾಕಲ್ಯಾಣ ಯೋಜನೆ – ಅರ್ಜಿ ಆಹ್ವಾನ

ಗಂಗಾ ಕಲ್ಯಾಣ ಯೋಜನೆ ಅನುಷ್ಠಾನಗೊಳಿಸಲಾಗಿದ್ದು, ಇದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
ಬಳ್ಳಾರಿ : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದ ವತಿಯಿಂದ ಪರಿಶಿಷ್ಟ ಪಂಗಡದ ಸಣ್ಣ ಮತ್ತು ಅತಿ ಸಣ್ಣ ರೈತರ ಖುಷ್ಕಿ ಜಮೀನುಗಳಿಗೆ ಕೊಳವೆಬಾವಿಗಳನ್ನು ಕೊರೆದು ಪಂಪು ಮೋಟಾರುಗಳನ್ನು ಅಳವಡಿಸಿ, ವಿದ್ಯುತ್ ಸಂಪರ್ಕ ಕಲ್ಪಿಸಿ, ನೀರಾವರಿ ಸೌಲಭ್ಯ ಕಲ್ಪಿಸಲು ಸಮಗ್ರ ಗಂಗಾ ಕಲ್ಯಾಣ ಯೋಜನೆ ಅನುಷ್ಠಾನಗೊಳಿಸಲಾಗಿದ್ದು, ಇದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಅಭ್ಯರ್ಥಿಯ ಜಾತಿ ಪ್ರಮಾಣ ಪತ್ರ, ಕುಟುಂಬದ ವಾರ್ಷಿಕ ವರಮಾನ ಪ್ರಮಾಣ ಪತ್ರ, ಚಾಲ್ತಿ ಪಹಣೆಯ ಪ್ರತಿ, ಆಧಾರ್ ಕಾರ್ಡ್ ಪ್ರತಿ, ಪಡಿತರ ಚೀಟಿಯ ಪ್ರತಿ, ಸಣ್ಣ ಮತ್ತು ಅತಿ ಸಣ್ಣ ಹಿಡುವಳಿದಾರರ ಪ್ರಮಾಣ ಪತ್ರದ ಪ್ರತಿಯನ್ನು ಹೊಂದಿರಬೇಕು.
ವೈಯಕ್ತಿಕ ನೀರಾವರಿ ಕೊಳವೆಬಾವಿ ಯೋಜನೆಯಡಿಯಲ್ಲಿ ರೈತರು ಕನಿಷ್ಠ 1.5 ಎಕೆರೆಯಿಂದ 5 ಎಕರೆಯವರೆಗಿನ ಖುಷ್ಕಿ ಜಮೀನಿ ಇರಬೇಕು. ಘಟಕಕ್ಕೆ 3.50 ಲಕ್ಷ ಇದ್ದು, ಇದರಲ್ಲಿ 2.50 ಲಕ್ಷ ರೂ. ಸಹಾಯಧನ, 0.50 ಲಕ್ಷ ವಿದ್ಯುದ್ದೀಕರಣ, ಹಾಗೂ 0.50 ಲಕ್ಷ ರೂ. ಅವಧಿ ಸಾಲವಾಗಿರುತ್ತದೆ.
ಏತ ನೀರಾವರಿ ಯೋಜನೆಯಡಿಯಲ್ಲಿ ನೈಸರ್ಗಿಕವಾದ ನದಿ, ತೊರೆ, ಹಳ್ಳ, ನಾಲೆಗಳ ಅಕ್ಕಪಕ್ಕದಲ್ಲಿ ಜಮೀನು ಹೊಂದಿರಬೇಕು. ಕನಿಷ್ಠ 8 ಎಕರೆಯವಗಿನ ಖುಷ್ಕಿ ಜಮೀನಿನ ಘಟಕ್ಕೆ 4 ಲಕ್ಷ ರೂ. ಮತ್ತು 15 ಎಕರೆ ಜಮೀನಿನ ಘಟಕಕ್ಕೆ 6 ಲಕ್ಷ ರೂ. ಸಹಾಯಧನ ನೀಡಲಾಗುತ್ತದೆ.
ಆಸಕ್ತರು ಅರ್ಹ ಅಭ್ಯರ್ಥಿಗಳು ಅರ್ಜಿಯ ಭರ್ತಿ ಮಾಡಿ ಅಗತ್ಯವಾದ ದಾಖಲಾತಿಗಳೊಂದಿಗೆ ಆ.31ರೊಳಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಕೆ.ಹೆಚ್.ಬಿ.ಕಾಲೋನಿ, ತಿಲಕನಗರ, ಕಂಟೋನ್ಮಂಟ್, ಬಳ್ಳಾರಿ ಇವರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ದೂ.ಸಂ.08392-245551 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.///

Quick Links : Film News | Politics News | Crime News | Health Tips | India News | World News | Tech News | Jokes | Food & Recipes | ದಿನಭವಿಷ್ಯ

ನಮ್ಮ Kannada News ತಾಣ ಇಷ್ಟವಾಗಿದ್ದರೆ, YouTube - Live News Channel ಗೆ ಚಂದಾದಾರರಾಗಿ. ತ್ವರಿತ ಕನ್ನಡ ನ್ಯೂಸ್ ಗಾಗಿ ನಮ್ಮನ್ನು News Videos ಸಮೇತ Twitter, Instagram ಮತ್ತು Facebook ನಲ್ಲಿ ಸಹ ಕಾಣಬಹುದು.