Business News

ಸ್ವಂತ ಮನೆ ಕನಸು ಕಂಡವರಿಗೆ ಕೇಂದ್ರ ಸರ್ಕಾರದ ಯೋಜನೆಯಿಂದ ಉಚಿತ ಮನೆ

ಸಾಮಾನ್ಯವಾಗಿ, ದುಡಿಮೆ ಆರಂಭಿಸಿದ ನಂತರ ಸ್ವಂತ ಮನೆ (own house) ನಿರ್ಮಾಣ ಮಾಡಿಕೊಳ್ಳಬೇಕು ಎಂದು ಎಲ್ಲರೂ ಆಸೆ ಪಡುತ್ತಾರೆ. ಆದರೆ “ಮನೆ ಕಟ್ಟಿ ನೋಡು ಮದುವೆ ಮಾಡಿ ನೋಡು” ಎನ್ನುವ ಮಾತಿನಂತೆ ಇಂದಿನ ದುಬಾರಿ ದುನಿಯಾದಲ್ಲಿ ಮನೆ ಕಟ್ಟಿಕೊಳ್ಳುವುದು ಅಷ್ಟು ಸುಲಭವಲ್ಲ.

ನಮಗೆ ಸ್ವಂತ ಜಾಗ (Own Land ) ಇದ್ದರೂ ಕೂಡ ಸಾಕಷ್ಟು ಆರ್ಥಿಕ ಸಮಸ್ಯೆ ಇರುವುದರಿಂದಾಗಿ ಮನೆ ನಿರ್ಮಾಣ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ. ಆದರೆ ಇದನ್ನು ಅರಿತಿರುವ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಆವಾಸ್ ಯೋಜನೆ (pradhanmantri aawas Yojana) ಯ ಅಡಿಯಲ್ಲಿ ಈಗಾಗಲೇ ಲಕ್ಷಾಂತರ ಕುಟುಂಬಗಳು ಸ್ವಂತ ಸೂರು ನೋಡುವಂತೆ ಮಾಡಿದೆ.

Free housing Scheme for 3 crore poor people, apply for PM Awas Yojana

ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಚಿನ್ನದ ಸಾಲ ನೀಡುವ ಬ್ಯಾಂಕ್‌ಗಳು ಇವು

ಪ್ರಧಾನ ಮಂತ್ರಿ ಆವಾಸ್ ಯೋಜನೆ 2024

2020 ರಲ್ಲಿ ಆರಂಭವಾದ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಹೊಸ ಅಧಿಸೂಚನೆಯ ಪ್ರಕಾರ ಲಕ್ಷಾಂತರ ಮನೆ ನಿರ್ಮಾಣ ಮಾಡಲು ಅರ್ಜಿ ಆಹ್ವಾನಿಸಲಾಗಿತ್ತು. ಸರ್ಕಾರ 2024ರ ವೇಳೆಗೆ ಲಕ್ಷಾಂತರ ಮನೆ ನಿರ್ಮಾಣ ಮಾಡುವ ಕನಸು ಹೊಂದಿತ್ತು. ಆದರೆ ಕೆಲವು ಕಾರಣಾಂತರಗಳಿಂದ ಈ ಕನಸು ಅಥವಾ ಗುರಿ ಈಡೇರಲು ಸಾಧ್ಯವಾಗಿಲ್ಲ. ಆದರೆ ಈಗ ಮತ್ತೆ ಗೃಹ ನಿರ್ಮಾಣಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಅತಿ ಕಡಿಮೆ ವೆಚ್ಚದಲ್ಲಿ ಸುಂದರವಾದ ಸ್ವಂತ ಮನೆ ನಿರ್ಮಾಣ ಮಾಡಿಕೊಳ್ಳಲು ಸಾಧ್ಯವಿದೆ.

ನಿಮ್ಮ ಮಗುವಿನ ಭವಿಷ್ಯಕ್ಕಾಗಿ ₹4,000 ಉಳಿತಾಯ ಮಾಡಿದ್ರೆ ₹22 ಲಕ್ಷ ಸಿಗುವ ಯೋಜನೆ

ಪ್ರಧಾನ್ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಮನೆ ನಿರ್ಮಾಣ!

housing schemeಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಕೇಂದ್ರ ಸರ್ಕಾರ (central government) ಕೊಟ್ಟಿರುವ ಅನುದಾನದ ಜೊತೆಗೆ ರಾಜ್ಯ ಸರ್ಕಾರದ ರಾಜೀವ್ ಗಾಂಧಿ ವಸತಿ ಯೋಜನೆ (Rajiv Gandhi housing scheme) ಯ ಅಡಿಯಲ್ಲಿ ಈಗಾಗಲೇ 52,189 ಮನೆಗಳ ನಿರ್ಮಾಣ ಆಗಿದೆ.

ಇನ್ನು ಬೆಂಗಳೂರು ನಗರ (Bengaluru City) ಮತ್ತು ಬೆಂಗಳೂರು ಗ್ರಾಮಾಂತರ (Bengaluru rural area) ಭಾಗದಲ್ಲಿ ಮನೆ ನಿರ್ಮಾಣ ಮಾಡಿ ಬಡವರಿಗೆ ಹಾಗೂ ಮಧ್ಯಮ ವರ್ಗದ ಕುಟುಂಬದವರಿಗೆ ನೀಡಲು ಸರ್ಕಾರ ತೀರ್ಮಾನಿಸಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಒಟ್ಟು 7.5 ಲಕ್ಷ ರೂಪಾಯಿಗಳಿಗೆ ಸಾಲ ಸೌಲಭ್ಯ (Subsidy Loan) ಪಡೆಯಬಹುದು.

ಆದರೆ ಈ ಹಣ ಪಡೆದುಕೊಳ್ಳಲು ಸಂಪೂರ್ಣ ಸಬ್ಸಿಡಿ (subsidy) ನೀಡಲಾಗುತ್ತದೆ. ಹಾಗಾಗಿ ಕೇವಲ ಒಂದು ಲಕ್ಷ ರೂಪಾಯಿಗಳಲ್ಲಿ ಮನೆ ನಿರ್ಮಾಣ ಮಾಡಿಕೊಳ್ಳಲು ಸಾಧ್ಯವಿದೆ.

ಬ್ಯಾಂಕ್ ಅಕೌಂಟ್ ಅಲ್ಲಿ ಎಷ್ಟು ಹಣ ಇಡಬಹುದು? ಲಿಮಿಟ್ ಎಷ್ಟು ಗೊತ್ತಾ?

ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು

ಪ್ರಧಾನ ಮಂತ್ರಿ ಅವಾಸ್ ಯೋಜನೆಯ ಅಡಿಯಲ್ಲಿ ಸದ್ಯ ಮಹಿಳಾ ಅರ್ಜಿದಾರರು ಮಾತ್ರ ಅರ್ಜಿ ಸಲ್ಲಿಸಬಹುದು. ವಿಕಲಚೇತನರು ಅಥವಾ ಮಾಜಿ ಸೈನಿಕರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಆದಾಯ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ ಯೋಧರಾಗಿದ್ದರೆ ಹಾಗೂ ವಿಶೇಷ ಚೇತನರಾಗಿದ್ದರೆ ಸರಕಾರದಿಂದ ದೃಢೀಕರಣ ಪ್ರಮಾಣಪತ್ರವನ್ನು ಸಲ್ಲಿಸಬೇಕು.

ಮನೆ ಕಟ್ಟೋಕೆ ಗೃಹ ಸಾಲ ಪಡೆಯುವಾಗ ಅಪ್ಪಿತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ

ಅರ್ಜಿ ಸಲ್ಲಿಸುವುದು ಹೇಗೆ? (How to apply for housing scheme)

ಸದ್ಯ ರಾಜೀವ್ ಗಾಂಧಿ ವಸತಿ ಯೋಜನೆಯ ಅಡಿಯಲ್ಲಿ ಕರ್ನಾಟಕದಲ್ಲಿ ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ ಭಾಗದಲ್ಲಿ ಮನೆ ನಿರ್ಮಾಣ ಮಾಡಿಕೊಳ್ಳಲು ಅವಕಾಶ ನೀಡಲಾಗುತ್ತಿದೆ

ಇದಕ್ಕಾಗಿ ನೀವು ಸರ್ಕಾರದ ಅಧಿಕೃತ ವೆಬ್ಸೈಟ್ ಆಗಿರುವ https://ashraya.karnataka.gov.in/ ಭೇಟಿ ನೀಡಿ ಸರಿಯಾದ ಮಾಹಿತಿಗಳನ್ನು ಭರ್ತಿ ಮಾಡಿ, ದಾಖಲೆಗಳನ್ನು ಅಪ್ಲೋಡ್ ಮಾಡಬೇಕು.

ನಂತರ ಡಿಪಾಸಿಟ್ ಹಣವನ್ನು ಆನ್ಲೈನ್ ಮೂಲಕವೇ ಕಳುಹಿಸಬೇಕು. ನಿಮ್ಮ ಆನ್ಲೈನ್ ಪೇಮೆಂಟ್ ಆಗುತ್ತಿದ್ದಂತೆ ಅರ್ಜಿ ಸಲ್ಲಿಕೆ ಪೂರ್ಣಗೊಳ್ಳುತ್ತದೆ ಹಾಗೂ ಅರ್ಹ ಫಲಾನುಭವಿಗಳಿಗೆ ಮನೆ ಕಟ್ಟಿಕೊಳ್ಳಲು ಸಬ್ಸಿಡಿ ನೀಡಲಾಗುತ್ತದೆ.

A free house from the central government scheme for those who dream of own house

Our Whatsapp Channel is Live Now 👇

Whatsapp Channel

Kannada News Today

Kannada News Today 🌐

Providing News, information & entertainment in Kannada Language, Since 2019. This Website reacts as a voice of the people & representative of a common man. as per Google it was first indexed in March 2019
FacebookX
We value your thoughts!
Send your feedback to us at kannadanewstoday@gmail.com

Related Stories