ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಆಹ್ವಾನ! ಅರ್ಜಿ ಸಲ್ಲಿಸಲು ಸಂಪೂರ್ಣ ಮಾಹಿತಿ
ಸಾಮಾನ್ಯವಾಗಿ ನಗರ ಭಾಗದಲ್ಲಿ ಹೆಣ್ಣು ಮಕ್ಕಳು ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡಿ ಹಣ ಸಂಪಾದನೆ ಮಾಡುತ್ತಾರೆ. ಆದರೆ ಹಳ್ಳಿಗಳಲ್ಲಿ ಹೆಚ್ಚಾಗಿ ಮನೆಯಲ್ಲಿಯೇ ಇರುವ ಗೃಹಿಣೀಯರ ಸಂಖ್ಯೆ ಜಾಸ್ತಿ.
ಆದರೆ ಈಗ ಜಿಲ್ಲಾ ಪಂಚಾಯತ್ ವತಿಯಿಂದ ಹಳ್ಳಿಯಲ್ಲಿ ವಾಸಿಸುವ ಮಹಿಳೆಯರು ಕೂಡ ಸ್ವಾವಲಂಬಿ ಜೀವನ ನಡೆಸಲು ಉಚಿತ ಹೊಲಿಗೆ ಯಂತ್ರ (Free Sewing Machine) ಹಾಗೂ ಇತರ ಕಸುಬುಗಳಿಗೆ ಬೇಕಾಗಿರುವ ಉಪಕರಣಗಳನ್ನು ಉಚಿತವಾಗಿ ನೀಡಲು ಹೊಸ ಯೋಜನೆ ರೂಪಿಸಲಾಗಿದೆ.

ಬಡವರಿಗೆ ಉಚಿತ ವಸತಿ ಯೋಜನೆ! ಅರ್ಜಿ ಸಲ್ಲಿಸಲು ಲಿಂಕ್ ಜೊತೆ ಮಾಹಿತಿ ಇಲ್ಲಿದೆ
ಯಾರಿಗೆ ಸಿಗಲಿದೆ ಉಚಿತ ಉಪಕರಣಗಳು?
ಇದು ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಹಾಗೂ ಕೋಲಾರ ಮತ್ತು ವಿಜಯಪುರ ಜಿಲ್ಲಾ ಪಂಚಾಯತ್ ವತಿಯಿಂದ ಮಹಿಳೆಯರಿಗಾಗಿ ಜಾರಿಗೆ ತರಲಾಗಿರುವ ಯೋಜನೆ ಆಗಿದೆ. ಸರ್ಕಾರಿ ಉದ್ಯೋಗ ಮಾಡುತ್ತಿರುವವರನ್ನು ಹೊರತುಪಡಿಸಿ ಬೇರೆ ಎಲ್ಲಾ ಮಹಿಳೆಯರು ಉಚಿತ ಹೊಲಿಗೆ ಯಂತ್ರದ ಜೊತೆಗೆ ಇತರ ಉಪಕರಣಗಳನ್ನು ಕೂಡ ಪಡೆದುಕೊಳ್ಳಬಹುದು. ಆನ್ಲೈನ್ ಮೂಲಕ ನೀವು ಒಂದು ಅರ್ಜಿ ಹಾಕಿದ್ರೆ ಸಾಕು ನಿಮಗೆ ಈ ಸೌಲಭ್ಯ ದೊರಕುತ್ತದೆ.
ಅರ್ಜಿ ಹಾಕಲು ಬೇಕಾಗಿರುವ ದಾಖಲೆಗಳು
ಅಭ್ಯರ್ಥಿಯ ಆಧಾರ್ ಕಾರ್ಡ್
ಹೊಲಿಗೆ ವೃತ್ತಿ ಮಾಡುತ್ತಿರುವ ಬಗ್ಗೆ ದೃಢೀಕರಣ ಪ್ರಮಾಣ ಪತ್ರ
ರೇಷನ್ ಕಾರ್ಡ್
ಆದಾಯ ಪ್ರಮಾಣ ಪತ್ರ
ಜಾತಿ ಪ್ರಮಾಣ ಪತ್ರ
ವಿಳಾಸದ ಪುರಾವೆ
ಭಾವಚಿತ್ರ
ಬ್ಯಾಂಕ್ ಗಿಂತ ಹೆಚ್ಚು ಲಾಭ ಕೊಡುವ ಪೋಸ್ಟ್ ಆಫೀಸ್ ಯೋಜನೆಗಳು ಇವು! ಬಂಪರ್ ಕೊಡುಗೆ
ಅರ್ಜಿ ಯಾರು ಸಲ್ಲಿಸಬಹುದು?
* ಗಾರೆ ಕೆಲಸ, ಕ್ಷೌರಿಕ, ದೋಬಿ ಕೆಲಸ ಮೊದಲಾದ ಕೆಲಸ ಮಾಡುತ್ತಿರುವವರು ಈ ಯೋಜನೆಯ ಅಡಿಯಲ್ಲಿ ಉಚಿತ ಉಪಕರಣಗಳನ್ನು ಪಡೆಯಬಹುದು.
* ಬಡತನ ರೇಖೆಗಿಂತ ಕೆಳಗಿನವರಾಗಿದ್ದು ಬಿಪಿಎಲ್ ರೇಷನ್ ಕಾರ್ಡ್ ಹೊಂದಿರಬೇಕು
* ಯಾವುದೇ ಸರ್ಕಾರಿ ನೌಕರಿಯಲ್ಲಿ ಇರಬಾರದು
* 18 ರಿಂದ 55 ವರ್ಷ ವಯಸ್ಸಿನ ಒಳಗಿನವರು ಅರ್ಜಿ ಸಲ್ಲಿಸಬಹುದು
ಈ ಯೋಜನೆಯ ಅಡಿಯಲ್ಲಿ ಪ್ರತಿ ತಿಂಗಳು ಸಿಗುತ್ತೆ 1200 ರೂಪಾಯಿ! ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸುವುದು ಹೇಗೆ?
https://vijayapura.nic.in/ ಈ ಅಧಿಕೃತ ವೆಬ್ ಸೈಟ್ ಗೆ ಹೋಗಿ ಬೇಕಿರುವ ಎಲ್ಲಾ ದಾಖಲೆಗಳನ್ನು ನೀಡಿ, ನಂತರ ಅರ್ಜಿ ಸಲ್ಲಿಸಿ. ಅಥವಾ ವಿಜಯಪುರ ಜಿಲ್ಲೆ ಮತ್ತು ಕೋಲಾರ ಜಿಲ್ಲೆಯ ಜಿಲ್ಲಾ ಪಂಚಾಯತ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಈ ರೀತಿ ಉಚಿತ ಹೊಲಿಗೆ ಯಂತ್ರ ಮತ್ತು ಇತರ ಉಪಕರಣಗಳನ್ನು ನೀಡುವ ಯೋಜನೆ ರಾಜ್ಯದ ವಿವಿಧ ಜಿಲ್ಲೆಯಲ್ಲಿ ಜಾರಿಗೆ ಬರುತ್ತಿದ್ದು ಗ್ರಾಮೀಣ ಭಾಗದಲ್ಲಿ ವಾಸಿಸುವವರಿಗೆ ಸ್ವಂತ ಉದ್ಯಮ (Own Business) ಮಾಡಲು ಹೆಚ್ಚು ಅನುಕೂಲವಾಗಲಿದೆ.
ಉಚಿತ ಮನೆ ಯೋಜನೆ ಫಲಾನುಭವಿಗಳ ಪಟ್ಟಿ ಬಿಡುಗಡೆ! ನೀವಿನ್ನೂ ಅರ್ಜಿ ಸಲ್ಲಿಸಿಲ್ವಾ?
Apply for Free Sewing Machine, Complete information to apply