Gold Price Today: ಚಿನ್ನದ ಬೆಲೆ ಭಾರೀ ಕುಸಿತ! ಖರೀದಿದಾರರಿಗೆ ಗುಡ್ ನ್ಯೂಸ್, ಇಂದಿನ ದರ ಇಲ್ಲಿದೆ
Gold Price Today: ಕಳೆದ ಕೆಲವು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ದರಗಳಲ್ಲಿ ಇಳಿಕೆ ಕಂಡುಬಂದಿದ್ದು, ಮದುವೆ ಹಾಗೂ ಹಬ್ಬದ ಸೀಸನ್‌ಗೆ ಸಿದ್ಧವಾಗುತ್ತಿರುವ ಖರೀದಿದಾರರಿಗೆ ಇದು ಸ್ವಲ್ಪ ಮಟ್ಟಿನ ನೆಮ್ಮದಿ ನೀಡಿದೆ.

Gold Price Today: ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ದರಗಳು ಮತ್ತೆ ಸುದ್ದಿಯಲ್ಲಿವೆ. ಇತ್ತೀಚಿನ ದಿನಗಳಲ್ಲಿ ದಾಖಲೆ ಮಟ್ಟದ ಏರಿಕೆ ಕಂಡಿದ್ದ ಚಿನ್ನದ ಬೆಲೆ ಇದೀಗ ಗಣನೀಯವಾಗಿ ಇಳಿಕೆಯಾಗಿದ್ದು, ಖರೀದಿಗೆ ಕಾಯುತ್ತಿದ್ದವರಿಗೆ ಅವಕಾಶ ಸೃಷ್ಟಿಸಿದೆ.
ಹೈದರಾಬಾದ್‌ನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ₹1,53,170ಕ್ಕೆ ತಲುಪಿದ್ದರೆ, 22 ಕ್ಯಾರೆಟ್ ಚಿನ್ನ ₹1,40,410ರ ಮಟ್ಟದಲ್ಲಿ ವಹಿವಾಟು ನಡೆಸುತ್ತಿದೆ. ಇದೇ ವೇಳೆ ಬೆಳ್ಳಿ ದರ ಪ್ರತಿ ಕೆಜಿಗೆ ₹2,69,900ರ ಸುತ್ತಮುತ್ತ ಇದೆ.
ಬೆಂಗಳೂರು ಮಾರುಕಟ್ಟೆಯಲ್ಲೂ 24 ಕ್ಯಾರೆಟ್ 10 ಗ್ರಾಂ ಚಿನ್ನ ₹1,53,170 ಹಾಗೂ 22 ಕ್ಯಾರೆಟ್ ಚಿನ್ನ ₹1,40,410 ದರದಲ್ಲಿ ಲಭ್ಯವಾಗಿದೆ. ಚೆನ್ನೈನಲ್ಲಿ ಮಾತ್ರ ಚಿನ್ನದ ದರ ತುಸು ಹೆಚ್ಚಿದ್ದು, 24 ಕ್ಯಾರೆಟ್ ಚಿನ್ನ ₹1,54,920 ಮತ್ತು 22 ಕ್ಯಾರೆಟ್ ಚಿನ್ನ ₹1,42,010 ಆಗಿದೆ.
ಮುಂಬೈನಲ್ಲಿ 24 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆ 1,53,170 ರೂ.ಗಳಾಗಿದ್ದರೆ, 22 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆ 1,40,410 ರೂ.ಗಳಲ್ಲೇ ಇದೆ. ಚೆನ್ನೈನಲ್ಲಿ 24 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆ 1,54,920 ರೂ.ಗಳಾಗಿದ್ದರೆ, 22 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆ 1,42,010 ರೂ.ಗಳಾಗಿದೆ.
ತಜ್ಞರ ಪ್ರಕಾರ, ಅಂತರರಾಷ್ಟ್ರೀಯ ಮಾರುಕಟ್ಟೆಯ ಬೆಳವಣಿಗೆಗಳು, ಅಮೆರಿಕದ ಬಡ್ಡಿದರಗಳ ಕುರಿತ ಅನಿಶ್ಚಿತತೆ, ಕಚ್ಚಾ ತೈಲದ ಬೆಲೆ ಏರಿಕೆ ಮತ್ತು ಜಾಗತಿಕ ರಾಜಕೀಯ ಬೆಳವಣಿಗೆಗಳು ಚಿನ್ನದ ದರದ ಮೇಲೆ ಪರಿಣಾಮ ಬೀರುತ್ತಿವೆ.
ಇತ್ತೀಚಿನ ದರ ಇಳಿಕೆಯಿಂದ ಮದುವೆ ಹಾಗೂ ಹಬ್ಬದ ಖರೀದಿಗೆ ಯೋಜನೆ ಮಾಡಿಕೊಂಡಿರುವ ಕುಟುಂಬಗಳಿಗೆ ಸ್ವಲ್ಪ ನಿರಾಳತೆ ಸಿಕ್ಕಂತಾಗಿದೆ. ಆದರೆ ಮಾರುಕಟ್ಟೆಯ ಅಸ್ಥಿರತೆ ಇನ್ನೂ ಮುಂದುವರಿಯುವ ಸಾಧ್ಯತೆ ಇರುವುದರಿಂದ ಹೂಡಿಕೆದಾರರು ಎಚ್ಚರಿಕೆಯಿಂದ ನಿರ್ಧಾರ ಕೈಗೊಳ್ಳುವಂತೆ ತಜ್ಞರು ಸಲಹೆ ನೀಡಿದ್ದಾರೆ.



