ಸರ್ಕಾರವೇ ಕೊಡುತ್ತೆ 75,000 ವರೆಗಿನ ವಿದ್ಯಾರ್ಥಿವೇತನ! ಕೂಡಲೇ ಯೋಜನೆಗೆ ಅರ್ಜಿ ಸಲ್ಲಿಸಿ

Education Scholarship : ಶಿಕ್ಷಣ (Education) ಎನ್ನುವುದು ಪ್ರತಿಯೊಬ್ಬರ ಹಕ್ಕು (rights) ಎಲ್ಲರಿಗೂ ಕೂಡ ಸರಿಯಾದ ಶಿಕ್ಷಣ ದೊರೆಯಬೇಕು ಆದರೆ ಈ ರೀತಿ ಪ್ರತಿಯೊಬ್ಬರು ಶಿಕ್ಷಣ ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ.
ಇಂದಿನ ದುಬಾರಿ ದುನಿಯಾದಲ್ಲಿ ಶಿಕ್ಷಣ ಕೂಡ ಕಾಸ್ಟ್ಲಿ ಆಗುತ್ತಿದೆ. ಹೀಗಾಗಿ ಆದಷ್ಟು ಬಡ ಕುಟುಂಬದವರು ತಮ್ಮ ಮಕ್ಕಳನ್ನ ಓದಿಸುವುದಕ್ಕೆ ಕಳುಹಿಸುವುದೇ ಇಲ್ಲ. ಇದಕ್ಕೆಲ್ಲ ಪ್ರಮುಖ ಕಾರಣ ಆರ್ಥಿಕ ಸಮಸ್ಯೆ ಕೂಡ ಹೌದು.
ಇದೀಗ ಸರ್ಕಾರ ಕಲಿಕಾ ಭಾಗ್ಯ ಯೋಜನೆಯ ಅಡಿಯಲ್ಲಿ 75,000ಗಳ ವರೆಗಿನ ವಿದ್ಯಾರ್ಥಿ ವೇತನವನ್ನು ನೀಡಲು ಮುಂದಾಗಿದ್ದು, ಕಾರ್ಮಿಕ ಮಕ್ಕಳಿಗೆ ಈ ಯೋಜನೆ ಆರಂಭಿಸಲಾಗಿದೆ.
ಪೋಸ್ಟ್ ಆಫೀಸ್ ನಲ್ಲಿ 2 ಲಕ್ಷ ರೂಪಾಯಿ ಇಟ್ರೆ ಎಷ್ಟು ಬಡ್ಡಿ ಸಿಗಲಿದೆ ಗೊತ್ತಾ? ಇಲ್ಲಿದೆ ಮಾಹಿತಿ
ಕಲಿಕಾ ಭಾಗ್ಯ ಯೋಜನೆ ಅಡಿಯಲ್ಲಿ ಸ್ಕಾಲರ್ಶಿಪ್
ಕಟ್ಟಡ ನಿರ್ಮಾಣ ಮತ್ತು ಇತರ ಕಾರ್ಮಿಕ ಕಲ್ಯಾಣ ಇಲಾಖೆಯ ವತಿಯಿಂದ ಕಲಿಕಾ ಭಾಗ್ಯ ಯೋಜನೆ ಜಾರಿಗೆ ಬಂದಿದ್ದು ಕಟ್ಟಡ ನಿರ್ಮಾಣ ಕೆಲಸದಲ್ಲಿ ತೊಡಗಿಕೊಂಡಿರುವ ಕುಟುಂಬದವರು ಕೂಡ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಿ ಆರಂಭಿಕ ವಿದ್ಯಾಭ್ಯಾಸದಿಂದ ಹಿಡಿದು ಉನ್ನತ ಶಿಕ್ಷಣವನ್ನು ಕೊಡಿಸಬಹುದು.
ಅರ್ಹ ಮತ್ತು ಆಸಕ್ತ ಕಟ್ಟಡ ನಿರ್ಮಾಣ ಕೆಲಸದಲ್ಲಿ ತೊಡಗಿರುವ ಕುಟುಂಬದವರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು.
ಈ ಹಸು ದಿನಕ್ಕೆ 50 ಲೀಟರ್ ಹಾಲು ಕೊಡುತ್ತೆ! ತಿಂಗಳಿಗೆ 50 ಸಾವಿರಕ್ಕೂ ಹೆಚ್ಚು ಆದಾಯ
ವಿದ್ಯಾರ್ಥಿವೇತನದ ಮೊತ್ತ ಎಷ್ಟು?
* ಮೂರರಿಂದ ಐದು ವರ್ಷಗಳ ನರ್ಸರಿ ಮಕ್ಕಳಿಗೆ ವಾರ್ಷಿಕ 5,000
* ಒಂದರಿಂದ ನಾಲ್ಕನೇ ತರಗತಿ ಓದುವ ಮಕ್ಕಳಿಗೆ 5000
* ಐದರಿಂದ ಎಂಟನೇ ತರಗತಿ ಓದುವ ವಿದ್ಯಾರ್ಥಿಗಳಿಗೆ ವಾರ್ಷಿಕ 8,000
* 9 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ 12,000 ರೂಪಾಯಿ
* ಪಿಯುಸಿ ಓದುವ ವಿದ್ಯಾರ್ಥಿಗಳಿಗೆ 15,000
* ಡಿಪ್ಲೋಮಾ ಓದುವ ವಿದ್ಯಾರ್ಥಿಗಳಿಗೆ 20,000
ಹೊಸ ಸ್ಕೀಮ್! ಈ ಪೋಸ್ಟ್ ಆಫೀಸ್ ಯೋಜನೆಯಲ್ಲಿ ಪ್ರತಿ ತಿಂಗಳು ಸಿಗಲಿದೆ 5500 ರೂಪಾಯಿ
ವಾರ್ಷಿಕ ಸ್ಕಾಲರ್ಶಿಪ್ ಸಿಗುತ್ತದೆ ಹಾಗೂ ವಿದ್ಯಾರ್ಥಿಗಳು ಓದುವ ಉನ್ನತ ವಿದ್ಯಾಭ್ಯಾಸಕ್ಕೆ ತಕ್ಕಂತೆ ಸ್ಕಾಲರ್ಶಿಪ್ ಮೊತ್ತ ಜಾಸ್ತಿ ಆಗುತ್ತಾ ಹೋಗುತ್ತದೆ. ಒಟ್ಟಿನಲ್ಲಿ ಕಲಿಕಾ ಭಾಗ್ಯ ಯೋಜನೆಯ ಅಡಿಯಲ್ಲಿ ಕಟ್ಟಡ ನಿರ್ಮಾಣದಲ್ಲಿ ತೊಡಗಿರುವ ಕುಟುಂಬದವರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಕಲಿಕಾ ಭಾಗ್ಯ ಯೋಜನೆಯ ಅಡಿಯಲ್ಲಿ ಸ್ಕಾಲರ್ಶಿಪ್ ತೆಗೆದುಕೊಂಡು ಮಕ್ಕಳನ್ನ ವಿದ್ಯಾವಂತರನ್ನಾಗಿ ಮಾಡಬಹುದು.
The government gives up to 75,000 Education scholarship
ವಿದ್ಯಾರ್ಥಿವೇತನದ ಮೊತ್ತ ಎಷ್ಟು?



