ಉತ್ತರ ಪ್ರದೇಶದ ಪಿಲಿಭಿತ್ನ ರಸ್ತೆ ಅಪಘಾತದಲ್ಲಿ 10 ಮಂದಿ ಸಾವು
ಉತ್ತರ ಪ್ರದೇಶದ ಪಿಲಿಭಿತ್ ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಲಕ್ನೋ: ಉತ್ತರ ಪ್ರದೇಶದ ಪಿಲಿಭಿತ್ ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಮಿನಿ ವ್ಯಾನ್ ಪಲ್ಟಿಯಾಗಿ ಮರಕ್ಕೆ ಡಿಕ್ಕಿ ಹೊಡೆದಿದೆ. ಇದರಿಂದ 10 ಯಾತ್ರಿಕರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಇತರ ಏಳು ಮಂದಿ ಗಾಯಗೊಂಡಿದ್ದಾರೆ.
ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಹಾರ ಕ್ರಮ ಕೈಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಅವರಲ್ಲಿ ಇಬ್ಬರ ಪರಿಸ್ಥಿತಿ ವಿಷಮವಾಗಿದೆ ಎಂದು ಹೇಳಿದ್ದಾರೆ. ಹರಿದ್ವಾರದಿಂದ 18 ಮಂದಿ ಮನೆಗೆ ಮರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ.
ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅಪಘಾತದ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಆದೇಶಿಸಿದರು.
10 Died In Road Accident In Uttar Pradesh Pilibhit
Follow Us on : Google News | Facebook | Twitter | YouTube