ಜಾರ್ಖಂಡ್; ಶಾಲೆಯಿಂದ ಮನೆಗೆ ತೆರಳುತ್ತಿದ್ದ ಬಾಲಕಿ ಅಪಹರಿಸಿ ಅತ್ಯಾಚಾರ
ಜಾರ್ಖಂಡ್‌ನಲ್ಲಿ ಅಮಾನುಷ ಘಟನೆಯೊಂದು ನಡೆದಿದೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ 6ನೇ ತರಗತಿ ಬಾಲಕಿಯನ್ನು ಅಪರಿಚಿತರು ಅಪಹರಿಸಿ ಅತ್ಯಾಚಾರ ಎಸಗಿದ್ದಾರೆ.
ಜಾರ್ಖಂಡ್‌ನಲ್ಲಿ ಅಮಾನುಷ ಘಟನೆಯೊಂದು ನಡೆದಿದೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ 6ನೇ ತರಗತಿ ಬಾಲಕಿಯನ್ನು ಅಪರಿಚಿತರು ಅಪಹರಿಸಿ ಅತ್ಯಾಚಾರ ಎಸಗಿದ್ದಾರೆ. ದಮ್ಕಾ ಜಿಲ್ಲೆಯ ಗೋಪಿಕಂದರ್ ಪೊಲೀಸ್ ಠಾಣೆಯಲ್ಲಿ ಬುಧವಾರ ಈ ಘಟನೆ ನಡೆದಿದೆ.
12 ವರ್ಷದ ಬಾಲಕಿಯೊಬ್ಬಳು ಶಾಲೆಗೆ ಹೋದ ನಂತರ ನೋಟ್‌ಬುಕ್ ಅನ್ನು ಮರೆತು ಅದನ್ನು ಹಿಂಪಡೆಯಲು ಮನೆಗೆ ಹೋಗಿದ್ದಳು. ಬಾಲಕಿ ನಡೆದುಕೊಂಡು ಹೋಗುತ್ತಿದ್ದಾಗ ಕಾರಿನಲ್ಲಿ ಬಂದ ಇಬ್ಬರು ವ್ಯಕ್ತಿಗಳು ವಿಳಾಸ ಕೇಳಿದ್ದಾರೆ. ಬಾಲಕಿ ಉತ್ತರಿಸುವ ಮುನ್ನವೇ ಆಕೆಯನ್ನು ಕಾರಿನಲ್ಲಿ ಕಿಡ್ನಾಪ್ ಮಾಡಿ ಕರೆದುಕೊಂಡು ಹೋಗಿದ್ದಾರೆ. ಬಳಿಕ ಅತ್ಯಾಚಾರ ಎಸಗಿದ್ದಾರೆ.
ಮರುದಿನ ಆಕೆಯನ್ನು ಸಮೀಪದ ಗೊಡ್ಡಾ ಪೊಲೀಸ್ ಠಾಣೆ ಬಳಿ ಬಿಡಲಾಯಿತು. ಘಟನೆಯನ್ನು ಬಾಲಕಿ ತನ್ನ ಪೋಷಕರಿಗೆ ವಿವರಿಸಿದ್ದಾಳೆ. ಅವರು ದಮ್ಕಾ ಜಿಲ್ಲಾ ಪೊಲೀಸ್ ಉನ್ನತ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಇದೀಗ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆ ಮತ್ತು ಚಿಕಿತ್ಸೆಗಾಗಿ ಫುಲೋ ಜಾನೋ ಮುರ್ಮು ವೈದ್ಯಕೀಯ ಕಾಲೇಜಿಗೆ ರವಾನಿಸಿದ್ದಾರೆ. ಆದರೆ, ಆರೋಪಿಗಳ ಗುರುತು ಇನ್ನೂ ಪತ್ತೆಯಾಗಿಲ್ಲ. ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
12 Year Old Girl Kidnapped Raped in Jharkhand
Follow us On
Google News |