Ambulance Accident, ಆಂಬ್ಯುಲೆನ್ಸ್ ಪಲ್ಟಿಯಾಗಿ ಇಬ್ಬರು ಬಿಎಸ್ಎಫ್ ಯೋಧರು ಸಾವು
Ambulance Accident, ಗಡಿ ಭದ್ರತಾ ಪಡೆ (ಬಿಎಸ್ಎಫ್) ಸಿಬ್ಬಂದಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ಡಿವೈಡರ್ಗೆ ಡಿಕ್ಕಿ ಹೊಡೆದ ನಂತರ ಪಲ್ಟಿ ಹೊಡೆದು ಇಬ್ಬರು ಯೋಧರು ಸಾವನ್ನಪ್ಪಿದ್ದಾರೆ.
Ambulance Accident – ನವದೆಹಲಿ : ಗಡಿ ಭದ್ರತಾ ಪಡೆ (ಬಿಎಸ್ಎಫ್) ಸಿಬ್ಬಂದಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ಡಿವೈಡರ್ಗೆ ಡಿಕ್ಕಿ ಹೊಡೆದ ನಂತರ ಪಲ್ಟಿ ಹೊಡೆದು ಇಬ್ಬರು ಯೋಧರು ಸಾವನ್ನಪ್ಪಿದ್ದಾರೆ. ಮಂಗಳವಾರ ಪೊಲೀಸರು ಈ ಮಾಹಿತಿ ನೀಡಿದ್ದಾರೆ. ಬಿಎಸ್ಎಫ್ ಆಂಬ್ಯುಲೆನ್ಸ್ನ ಟೈರ್ ಒಂದರ ದೋಷದಿಂದ ಅಪಘಾತ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೃತರನ್ನು ಬಿಹಾರ ಮೂಲದ ಯೋಧ ಮನೋಜ್ ಪಾಸ್ವಾನ್ (32) ಮತ್ತು ಉತ್ತರ ಪ್ರದೇಶದ ಶಾಮ್ಲಿ ನಿವಾಸಿ ಯಶ್ವೀರ್ ಸಿಂಗ್ (52) ಎಂದು ಗುರುತಿಸಲಾಗಿದೆ. ಸೋಮವಾರ ಬೆಳಗ್ಗೆ ಆಂಬ್ಯುಲೆನ್ಸ್ನಲ್ಲಿ ಆರು ಬಿಎಸ್ಎಫ್ ಸಿಬ್ಬಂದಿಯನ್ನು ಇನ್ಸ್ಟಿಟ್ಯೂಟ್ ಆಫ್ ಹ್ಯೂಮನ್ ಬಿಹೇವಿಯರಲ್ ಅಂಡ್ ಅಲೈಡ್ ಸೈನ್ಸಸ್ ಮತ್ತು ಸಫ್ದರ್ಜಂಗ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯುತ್ತಿದ್ದಾಗ ಶಾಸ್ತ್ರಿ ಪಾರ್ಕ್ ಮೆಟ್ರೋ ನಿಲ್ದಾಣದ ಬಳಿ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Follow Us on : Google News | Facebook | Twitter | YouTube