ಕಾರು-ಟ್ರಕ್ ಮುಖಾಮುಖಿ ಅಪಘಾತ, ಇಬ್ಬರು ಮಹಿಳೆಯರು ಸಾವು
ಮಳವಳ್ಳಿ ಬಳಿ ಕಾರು-ಟ್ರಕ್ ಮುಖಾಮುಖಿ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸಾವು ಇತರ 20 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಂಗಳೂರು/ ಮಂಡ್ಯ: ಮಳವಳ್ಳಿ ಬಳಿ ಕಾರು-ಟ್ರಕ್ ಮುಖಾಮುಖಿ ಅಪಘಾತದಲ್ಲಿ (Accident) ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದು ಇತರ 20 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನಲ್ಲಿ ಸರಕು ಸಾಗಣೆ ಟ್ರಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದಿದೆ. ಈ ಅವಘಡದಲ್ಲಿ ಕಾರಿನ ಮುಂಭಾಗ ಹಾಗೂ ಸರಕು ಸಾಗಣೆ ವಾಹನ ನಜ್ಜುಗುಜ್ಜಾಗಿದೆ.
ಈ ಅವಘಡದಲ್ಲಿ ಇಬ್ಬರು ಮಹಿಳೆಯರು ಅವಶೇಷಗಳಡಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇತರ 20 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ನಂತರ ಪೊಲೀಸರು ಗಾಯಗೊಂಡ 20 ಜನರನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಅಲ್ಲಿ ಅವರಿಗೆ ತೀವ್ರ ನಿಗಾ ವಹಿಸಲಾಗಿದೆ. ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
2 women died in Car-truck collision
Follow us On
Google News |