14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, 23 ವರ್ಷದ ಯುವಕನ ಬಂಧನ

ಉತ್ತರ ಪ್ರದೇಶದಲ್ಲಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 23 ವರ್ಷದ ಯುವಕನನ್ನು ಬಂಧಿಸಲಾಗಿದೆ.

Bengaluru, Karnataka, India
Edited By: Satish Raj Goravigere

ಲಕ್ನೋ: ಉತ್ತರ ಪ್ರದೇಶದಲ್ಲಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 23 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಳಿದ 2 ಆರೋಪಿಗಳ ಹುಡುಕಾಟ ಮುಂದುವರೆದಿದೆ, ಘಟನೆ ಕುರಿತು ಜಿಯಾನ್‌ಪುರ ವೃತ್ತಾಧಿಕಾರಿ ಭುವನೇಶ್ವರ್ ಪಾಂಡೆ ಮಾತನಾಡಿ, ಗ್ರಾಮದ 14 ವರ್ಷದ ಬಾಲಕಿಯನ್ನು ಅದೇ ಗ್ರಾಮದ 45 ವರ್ಷದ ವ್ಯಕ್ತಿ ಅಪಹರಿಸಿದ್ದಾನೆ.

14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, 23 ವರ್ಷದ ಯುವಕನ ಬಂಧನ

ಬಾಲಕಿಯನ್ನು ಬಲವಂತವಾಗಿ ಮುಂಬೈಗೆ ಕರೆದೊಯ್ಯಲಾಯಿತು. ಅಲ್ಲಿದ್ದಾಗ, ಆ ವ್ಯಕ್ತಿ, ಇನ್ನೊಬ್ಬ ವ್ಯಕ್ತಿಯೊಂದಿಗೆ ಸೇರಿ ಐದು ತಿಂಗಳ ಕಾಲ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.

ನಂತರ ಕ್ರೂರ ಗ್ಯಾಂಗ್‌ನ ಹಿಡಿತದಿಂದ ತಪ್ಪಿಸಿಕೊಂಡ ಬಾಲಕಿಯನ್ನು ಜೂನ್ 27 ರಂದು ಪೊಲೀಸರಿಗೆ ಬಾಲಕಿ ವಿವರಿಸಿದ ನಂತರ ಮೂವರು ಆರೋಪಿಗಳ ವಿರುದ್ಧ ಐಪಿಸಿ ಮತ್ತು ಪೋಕ್ಸೊ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದರು.

ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿ ಆಕೆಯ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ 23 ವರ್ಷದ ಯುವಕನನ್ನು ಬಂಧಿಸಲಾಗಿದೆ. ಅಲ್ಲದೆ ಇನ್ನಿಬ್ಬರು ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

23-year-old man arrested in case of gang rape of 14-year-old girl