Crime News: ಫಾರ್ಮಸಿ ಮಾಲೀಕನ ಮನೆಯಲ್ಲಿ ಕಳ್ಳತನ ಮಾಡಿದ್ದ ಮೂವರ ಬಂಧನ
ಫಾರ್ಮಸಿ ಮಾಲೀಕನ ಮನೆಯಿಂದ ಕಳ್ಳತನ (Theft) ಮಾಡಿದ್ದ ಮೂವರನ್ನು ಪೊಲೀಸರು ಬಂಧಿಸಿ ಅರ್ಧ ಕೆಜಿ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.
ಕೊಳ್ಳೇಗಾಲ: ಫಾರ್ಮಸಿ ಮಾಲೀಕನ ಮನೆಯಿಂದ ಕಳ್ಳತನ (Theft) ಮಾಡಿದ್ದ ಮೂವರನ್ನು ಪೊಲೀಸರು ಬಂಧಿಸಿ ಅರ್ಧ ಕೆಜಿ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.
ವಿನಯ್ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಬಸವೇಶ್ವರ ನಗರದವರು. ಫಾರ್ಮಸಿ ಮಾಲೀಕರು. ಕೆಲ ದಿನಗಳ ಹಿಂದೆ ಮನೆಗೆ ಬೀಗ ಹಾಕಿಕೊಂಡು ಕುಟುಂಬ ಸಮೇತ ಶಿವಮೊಗ್ಗಕ್ಕೆ ತೆರಳಿದ್ದರು. ಆಗ ಯಾರೋ ದುಷ್ಕರ್ಮಿಗಳು ಅವರ ಮನೆಯ ಬೀಗ ಒಡೆದು ಚಿನ್ನಾಭರಣ ಹಾಗೂ ಹಣವನ್ನು ದೋಚಿದ್ದಾರೆ. ಈ ಬಗ್ಗೆ ಕೊಳ್ಳೇಗಾಲ ಪೊಲೀಸರಿಗೆ (Kollegala Police) ದೂರು ನೀಡಲಾಗಿತ್ತು. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಳ್ಳರ ಪತ್ತೆಗೆ ವಿಶೇಷ ಪಡೆ ರಚಿಸಿದ್ದರು.
ಈ ವೇಳೆ ಈ ಕಳ್ಳತನಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ತನಿಖೆ ನಡೆಸಿದಾಗ ಅವರನ್ನು ಕಾಮಗೆರೆಯ ಭರತ್ (23), ಗುಂಡ್ಲುಪೇಟೆಯ ಕಾವ್ಯ (21) ಮತ್ತು ಮೈಸೂರಿನ ಲೋಹಿತ್ ಕುಮಾರ್ (25) ಎಂದು ಗುರುತಿಸಲಾಗಿದೆ. ಬಂಧಿತರಿಂದ 513 ಗ್ರಾಂ ಚಿನ್ನಾಭರಣ ಹಾಗೂ 20 ಸಾವಿರ ನಗದು ವಶಪಡಿಸಿಕೊಂಡಿದ್ದಾರೆ. ಬಂಧಿತ 3 ಮಂದಿಯನ್ನು ಪೊಲೀಸರು ಇನ್ನೂ ವಿಚಾರಣೆ ನಡೆಸುತ್ತಿದ್ದಾರೆ.
3 people arrested for stealing from pharmacy owner’s house
Follow us On
Google News |
Advertisement