Crime News; ದೆಹಲಿಯಲ್ಲಿ ಧಾರುಣ, ಮೂರು ವರ್ಷದ ಬಾಲಕಿ ಮೇಲೆ ಸಾಮೂಹಿಕ ಲೈಂಗಿಕ ದೌರ್ಜನ್ಯ
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ದುಷ್ಕೃತ್ಯವೊಂದು ನಡೆದಿದೆ. ಮೂರು ವರ್ಷದ ಬಾಲಕಿಯ ಮೇಲೆ ಇಬ್ಬರು ವ್ಯಕ್ತಿಗಳು ಸಾಮೂಹಿಕ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ.
Delhi Crime: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ದುಷ್ಕೃತ್ಯ ನಡೆದಿದೆ. ಮೂರು ವರ್ಷದ ಬಾಲಕಿಯ ಮೇಲೆ ಇಬ್ಬರು ವ್ಯಕ್ತಿಗಳು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ (sexual assault on a three-year-old girl). ದಕ್ಷಿಣ ದೆಹಲಿಯ ಫತೇಪುರ್ ಬೆರಿಯ ಮೂರು ವರ್ಷದ ಬಾಲಕಿ ಶುಕ್ರವಾರ ಬೆಳಗ್ಗೆ ನಾಪತ್ತೆಯಾಗಿದ್ದಳು. ಬಾಲಕಿಯ ಪೋಷಕರು ಆಕೆಗಾಗಿ ಹುಡುಕಾಟ ಆರಂಭಿಸಿದ್ದರು. ಈ ಸಂದರ್ಭದಲ್ಲಿ, ಅವರ ನೆರೆಹೊರೆಯ ವ್ಯಕ್ತಿಯೊಬ್ಬರು ಅವರನ್ನು ಭೇಟಿ ಮಾಡಲು ಬಂದರು. ಗ್ರಾಮದ ಕೊನೆ ಭಾಗದ ಅರಣ್ಯ ಪ್ರದೇಶದಲ್ಲಿ ಮಗುವನ್ನು ನೋಡಿರುವುದಾಗಿ ತಿಳಿಸಿದರು. ಇಬ್ಬರು ವ್ಯಕ್ತಿಗಳು ಆಕೆಯನ್ನು ಹೊತ್ತೊಯ್ಯುತ್ತಿದ್ದರು ಎಂದು ತಿಳಿದುಬಂದಿದೆ.
ಬಾಲಕಿಯ ಪೋಷಕರು ಸ್ಥಳಕ್ಕೆ ಧಾವಿಸಿದ್ದಾರೆ. ಬಾಲಕಿ ರಕ್ತಸ್ರಾವವಾಗಿ ಅಳುತ್ತಿರುವುದನ್ನು ಅವರು ನೋಡಿದ್ದಾರೆ. ಆಕೆಯನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು. ಅಲ್ಲಿಂದ ಅವರನ್ನು ಚಿಕಿತ್ಸೆಗಾಗಿ ಏಮ್ಸ್‌ಗೆ ಸ್ಥಳಾಂತರಿಸಲಾಯಿತು. ಈ ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇಬ್ಬರು ಶಂಕಿತರನ್ನು ಬಂಧಿಸಲಾಗಿದೆ. ಅವರನ್ನು ರಾಮ್ನಿವಾಸ್ ಪಣಿಕಾ (27) ಮತ್ತು ಶಕ್ತಿಮಾನ್ ಸಿಂಗ್ (22) ಎಂದು ಗುರುತಿಸಲಾಗಿದೆ. ಇಬ್ಬರೂ ವಿವಾಹಿತರಾಗಿದ್ದು, ಸ್ಥಳೀಯ ಕಸ ಮರುಬಳಕೆ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
3 Year Old Girl Gang Raped By 2 Men In Delhi
Follow us On
Google News |