ಮಧ್ಯಪ್ರದೇಶ: ಮಿನಿ ಟ್ರಕ್ ಅಪಘಾತದಲ್ಲಿ 5 ಸಾವು, 36 ಮಂದಿಗೆ ಗಾಯ
ಮಧ್ಯಪ್ರದೇಶದಲ್ಲಿ ಮದುವೆಗೆ ತೆರಳುತ್ತಿದ್ದ ಮಿನಿ ಟ್ರಕ್ ಪಲ್ಟಿಯಾಗಿ ಐವರು ಮೃತಪಟ್ಟಿದ್ದಾರೆ.
ಮಧ್ಯಪ್ರದೇಶದ ಶಾತೋಲ್ ಜಿಲ್ಲೆಯಲ್ಲಿ ಮದುವೆಗೆ ತೆರಳುತ್ತಿದ್ದ ಮಿನಿ ಟ್ರಕ್ ಪಲ್ಟಿಯಾಗಿ ಐವರು ಮೃತಪಟ್ಟಿದ್ದಾರೆ. ಇನ್ನೂ 36 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ಕುರಿತು ಪ್ರತಿಕ್ರಿಯಿಸಿದ ಬಿಯೋಹರಿ ಪೊಲೀಸ್ ಠಾಣಾಧಿಕಾರಿ ಸುಧೀರ್ ಸೋನಿ ಈ ಬಗ್ಗೆ ಮಾಹಿತಿ ನೀಡಿದರು.
ನಿನ್ನೆ ರಾತ್ರಿ 9.30 ರ ಸುಮಾರಿಗೆ 42 ಜನರನ್ನು ಹೊತ್ತೊಯ್ಯುತ್ತಿದ್ದ ಮಿನಿ ಟ್ರಕ್ ಟಿಕಾಹಿ ಗ್ರಾಮದ ತಾಬಾ ಬಳಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಅಪಘಾತದಲ್ಲಿ 15 ವರ್ಷದ ಬಾಲಕ ಸೇರಿದಂತೆ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ 36 ಮಂದಿ ಗಾಯಗೊಂಡಿದ್ದಾರೆ. ಅದರಲ್ಲಿ 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರು 40 ರಿಂದ 45 ವರ್ಷ ವಯಸ್ಸಿನವರು. ವಾಹನದ ಚಾಲಕ ಹಾಗೂ ವರ ಸುರಕ್ಷಿತವಾಗಿದ್ದಾರೆ.
ಗಾಯಗೊಂಡ 10 ಮಂದಿಯನ್ನು ಸ್ಥಳೀಯ ಆಸ್ಪತ್ರೆ ಮತ್ತು ಇತರರು ಪಿಯೋಹರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.
5 dead 36 injured in mini truck accident Madhya Pradesh
Follow Us on : Google News | Facebook | Twitter | YouTube