ಲಾರಿಗೆ ಡಿಕ್ಕಿ ಹೊಡೆದ ಮದುವೆ ಜೀಪ್.. ಆರು ಮಂದಿ ಸಾವು

ಉತ್ತರ ಪ್ರದೇಶದ ಅಮೇಥಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸೋಮವಾರ ಬೆಳಗ್ಗೆ ಅಮೇಥಿ ಜಿಲ್ಲೆಯ ಗೌರಿಗಂಜ್‌ನಲ್ಲಿ ವೇಗವಾಗಿ ಬಂದ ಮದುವೆ ಜೀಪ್ ಎದುರಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. 

ಲಕ್ನೋ: ಉತ್ತರ ಪ್ರದೇಶದ ಅಮೇಥಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸೋಮವಾರ ಬೆಳಗ್ಗೆ ಅಮೇಥಿ ಜಿಲ್ಲೆಯ ಗೌರಿಗಂಜ್‌ನಲ್ಲಿ ವೇಗವಾಗಿ ಬಂದ ಮದುವೆ ಜೀಪ್ ಎದುರಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಜೀಪಿನಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಅವರ ಸ್ಥಿತಿ ವಿಷಮವಾಗಿದೆ ಎಂದು ಹೇಳಿದರು. ರಾಯ್ ಬರೇಲಿಯಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ.

ಮೃತರಲ್ಲಿ ಎಂಟು ವರ್ಷದ ಬಾಲಕನೂ ಸೇರಿದ್ದಾನೆ ಎಂದು ಅವರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

6 Dead 4 Injured In Jeep Truck Collision In Uttar Pradeshs Amethi

Follow Us on : Google News | Facebook | Twitter | YouTube