Welcome To Kannada News Today

Madhya Pradesh: ಬಸ್ ಅಪಘಾತ 7 ಪ್ರಯಾಣಿಕರು ಸಾವು, 14 ಮಂದಿಗೆ ಗಾಯ

7 Dead, 14 Injured As Bus, Truck Collide In Madhya Pradesh: ಮಧ್ಯಪ್ರದೇಶದಲ್ಲಿ ಇಂದು ಬೆಳಗ್ಗೆ ಬಸ್ ಮತ್ತು ಕಂಟೇನರ್ ಟ್ರಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ 7 ಪ್ರಯಾಣಿಕರು ಸಾವನ್ನಪ್ಪಿದ್ದು, 14 ಮಂದಿ ಗಾಯಗೊಂಡಿದ್ದಾರೆ.

🌐 Kannada News :

ಭೋಪಾಲ್: ಮಧ್ಯಪ್ರದೇಶದಲ್ಲಿ ಇಂದು ಬೆಳಗ್ಗೆ ಬಸ್ ಮತ್ತು ಕಂಟೇನರ್ ಟ್ರಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ 7 ಪ್ರಯಾಣಿಕರು ಸಾವನ್ನಪ್ಪಿದ್ದು, 14 ಮಂದಿ ಗಾಯಗೊಂಡಿದ್ದಾರೆ (7 Dead, 14 Injured As Bus, Truck Collide In Madhya Pradesh).

ಮಧ್ಯಪ್ರದೇಶದಲ್ಲಿ ಶುಕ್ರವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಏಳು ಮಂದಿ ಸಾವನ್ನಪ್ಪಿದ್ದಾರೆ. ಮಧ್ಯಪ್ರದೇಶದ ಭಿಂದ್ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ವೇಗವಾಗಿ ಬಂದ ಬಸ್ ಕಂಟೇನರ್ ಗೆ ಡಿಕ್ಕಿ ಹೊಡೆದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದಾರೆ.

ಗೋಹಾಡ್ ಸ್ಕ್ವೇರ್ ಪ್ರದೇಶದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇನ್ನೂ 14 ಪ್ರಯಾಣಿಕರು ಗಾಯಗೊಂಡಿದ್ದಾರೆ. ಅಧಿಕಾರಿಗಳು, ಸ್ಥಳೀಯರು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅತಿವೇಗವೇ ಅಪಘಾತಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

ಭೀಂಡ್ ಜಿಲ್ಲೆಯ ಹಳ್ಳಿಯ ಸಮೀಪದ ಹೆದ್ದಾರಿಯಲ್ಲಿ ಬೆಳಿಗ್ಗೆ 7 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಗಾಯಗೊಂಡವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು 79 ಕಿಮೀ ದೂರದ ಗ್ವಾಲಿಯರ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಸ್ಸಿನಲ್ಲಿದ್ದ ಜನರು ಮಧ್ಯಪ್ರದೇಶದ ಬರೇಲಿಯ ಮಾರ್ಗವಾಗಿ ಗ್ವಾಲಿಯರ್ ಪಟ್ಟಣಕ್ಕೆ ಪ್ರಯಾಣಿಸುತ್ತಿದ್ದರು.

📣 ಇನ್ನಷ್ಟು ಕನ್ನಡ ಕ್ರೈಂ ನ್ಯೂಸ್ ಗಳಿಗಾಗಿ Crime News in Kannada, ಲೇಟೆಸ್ಟ್ ಅಪ್ಡೇಟ್ ಗಳ Kannada News ಗಾಗಿ Facebook & Twitter ಅನುಸರಿಸಿ.

📲 Google News ಹಾಗೂ Kannada News Today App ಡೌನ್ಲೋಡ್ ಮಾಡಿಕೊಳ್ಳಿ.

Scroll Down To More News Today