set fire to the houses, ಮನೆಗಳಿಗೆ ಬೆಂಕಿ ಹಚ್ಚಿದ ಪುಂಡರು, 8 ಮಂದಿ ಸಾವು

ರಾಮಪುರಹತ್ (set fire to the houses) : ಪಶ್ಚಿಮ ಬಂಗಾಳದಲ್ಲಿ ಹಿಂಸಾತ್ಮಕ ಘಟನೆ ನಡೆದಿದೆ. ಬಿರ್ಭುಮ್ ಜಿಲ್ಲೆಯ ರಾಮ್‌ಪುರಹತ್ ಉಪನಗರದ ಬೊಗ್ಟುಯಿ ಗ್ರಾಮದಲ್ಲಿ ಅಪರಿಚಿತ ದುಷ್ಕರ್ಮಿಗಳು ಎಂಟು ಮನೆಗಳಿಗೆ ಬೆಂಕಿ ಹಚ್ಚಿದಾಗ ಇಬ್ಬರು ಮಕ್ಕಳು ಸೇರಿದಂತೆ ಎಂಟು ಜನರು ಸಜೀವ ದಹನವಾಗಿದ್ದಾರೆ.

ಸೋಮವಾರ ರಾತ್ರಿ ಬರ್ಶಾಲ್ ಗ್ರಾಮದಲ್ಲಿ ಟಿಎಂಸಿ ನಾಯಕ ಭಾದು ಅವರನ್ನು ಹತ್ಯೆ ಮಾಡಲಾಗಿದೆ. ಹತ್ಯೆಯಾದ ಕೆಲವೇ ಗಂಟೆಗಳಲ್ಲಿ ಮಂಗಳವಾರ ಬೆಳಗ್ಗೆ ದುಷ್ಕರ್ಮಿಗಳು ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ.

ಏಳು ಮೃತದೇಹಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಒಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಡಿಜಿಪಿ ಮನೋಜ್ ಮಾಳವೀಯ ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ 11 ಶಂಕಿತರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು. ಘಟನೆ ಕುರಿತು ಮಮತಾ ಬ್ಯಾನರ್ಜಿ ಸರ್ಕಾರ ಎಡಿಜಿ ಗನ್ವಂತ್ ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಿದೆ.

72 ಗಂಟೆಯೊಳಗೆ ವಿವರಣೆ ನೀಡಿ..

ಮನೆಗಳಿಗೆ ಬೆಂಕಿ ಹಚ್ಚಿರುವ ಕುರಿತು 72 ಗಂಟೆಯೊಳಗೆ ವಿವರಣೆ ನೀಡುವಂತೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಕೇಂದ್ರ ಗೃಹ ಸಚಿವಾಲಯ ಸೂಚಿಸಿದೆ. ಇಲಾಖೆಯ ಜಂಟಿ ಕಾರ್ಯದರ್ಶಿ ಮಟ್ಟದ ಅಧಿಕಾರಿಗಳು ಶೀಘ್ರವೇ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ ಎಂದು ಮಾಹಿತಿ.

ರಾಜ್ಯದಲ್ಲಿ ಶಾಂತಿ ಮತ್ತು ಭದ್ರತೆ ಇಲ್ಲದ ಕಾರಣ ಮಮತಾ ಬ್ಯಾನರ್ಜಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಂದಾರ್ ಆಗ್ರಹಿಸಿದ್ದಾರೆ.

ಘಟನೆಯ ಕಾರಣಗಳ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಪಾರ್ಥ ಚಟರ್ಜಿ ವಿಧಾನಸಭೆಗೆ ತಿಳಿಸಿದರು. ಘಟನೆಯ ಬಗ್ಗೆ ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧನಕರ್ ಆಘಾತ ವ್ಯಕ್ತಪಡಿಸಿದ್ದಾರೆ.

Kannada News Today

Kannada News Today Providing News, information & entertainment in Kannada Language, Since 2019. This Website reacts as a… More »

Related Stories

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ