ರಾಜಸ್ಥಾನದಲ್ಲಿ ರಸ್ತೆ ಅಪಘಾತ, ಒಂದೇ ಕುಟುಂಬದ ಎಂಟು ಮಂದಿ ಸಾವು
ಮದುವೆಗೆ ಹೋಗಿ ಬರುವಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಎಂಟು ಮಂದಿ ಸಾವನ್ನಪ್ಪಿದ್ದಾರೆ
ರಾಜಸ್ಥಾನದ ಬಾರ್ಮರ್ ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರು-ಟ್ರಕ್ ಡಿಕ್ಕಿಯಾಗಿ ಒಂದೇ ಕುಟುಂಬದ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಮೃತರಲ್ಲಿ ಇಬ್ಬರು ಮಕ್ಕಳು ಸೇರಿದ್ದಾರೆ. ಸೋಮವಾರ ರಾತ್ರಿ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಗುಡಮಲಾನಿ (ಗುಡಮಲಾನಿ ಹೈವೇ) ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಘಟನೆಯ ನಂತರ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಗುಡಮಲಾನಿ ಹೆದ್ದಾರಿಯಲ್ಲಿ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಕಾರು ವೇಗವಾಗಿ ಬರುತ್ತಿದ್ದಾಗ ಟ್ರಕ್‌ಗೆ ಡಿಕ್ಕಿ ಹೊಡೆದಿದೆ.
ಮಾಹಿತಿ ಪಡೆದ ಸ್ಥಳೀಯರು ಅಲ್ಲಿಗೆ ಬಂದು ಕಾರಿನಲ್ಲಿದ್ದ ಇತರರನ್ನು ರಕ್ಷಿಸಲು ಯತ್ನಿಸಿದರು. ಪೊಲೀಸರಿಗೆ ಮಾಹಿತಿ ನೀಡಿದರು. ಅಪಘಾತದ ವೇಳೆ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡಿದ್ದ ನಾಲ್ವರನ್ನು ಗುಡಮಲಾನಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಇಬ್ಬರು ಸಾವನ್ನಪ್ಪಿದ್ದಾರೆ.
ಮದುವೆಗೆ ತೆರಳಿದ್ದ ಒಂದೇ ಕುಟುಂಬದ 8 ಮಂದಿ ಅಪಘಾತದಲ್ಲಿ ಮೃತಪಟ್ಟಿದ್ದು ಗ್ರಾಮದಲ್ಲಿ ಸೂತಕದ ಛಾಯೆ ಇತ್ತು. ಗಮ್ಯಸ್ಥಾನದಿಂದ 8 ಕಿ.ಮೀ ದೂರದಲ್ಲಿ ಅಪಘಾತ ಸಂಭವಿಸಿದ್ದರಿಂದ ಮೃತರ ಕುಟುಂಬಸ್ಥರು ಶೋಕದಲ್ಲಿ ಮುಳುಗಿದ್ದಾರೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
8 people died in same family at Road accident Rajasthan