Hubli Accident: ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ, 8 ಮಂದಿ ಸಾವು

Hubli Accident Today: ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ, ಲಾರಿ ಹಾಗೂ ಖಾಸಗಿ ಬಸ್ (Lorry and a private bus) ಮುಖಾಮುಖಿ ಡಿಕ್ಕಿಯಾಗಿ (8 People Died) 8 ಮಂದಿ ಸಾವನ್ನಪ್ಪಿದ್ದಾರೆ, ಘಟನೆಯಲ್ಲಿ ಗಾಯಗೊಂಡಿರುವ ಸುಮಾರು 25 ಮಂದಿಯನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ತಡರಾತ್ರಿ ಹುಬ್ಬಳ್ಳಿ ಭೀಕರ ಅಪಘಾತಕ್ಕೆ ಸಾಕ್ಷಿಯಾಗಿದೆ, ಲಾರಿ ಹಾಗೂ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ತೀವ್ರ ಗಾಯಗೊಂಡಿದ್ದ ಇಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ, ಒಟ್ಟಾರೆ ಮೃತರ ಸಂಖ್ಯೆ ಎಂಟಕ್ಕೆ ಏರಿದೆ, ಈ ಭೀಕರ ಅಪಘಾತ ಹುಬ್ಬಳ್ಳಿಯ (Hubli-Dharwad) ತಾರಿಹಾಳ ಬೈಪಾಸ್ನಲ್ಲಿ ನಡೆದಿರುವುದಾಗಿ ತಿಳಿದುಬಂದಿದೆ..
ಹುಬ್ಬಳ್ಳಿಯಲ್ಲಿ ರಾತ್ರಿ 12 ಗಂಟೆಗೆ ನಡೆದ ಭೀಕರ ಅಪಘಾತ, 8 ಮಂದಿ ಸಾವು
ಅಪಘಾತದಲ್ಲಿ ಇನ್ನಷ್ಟು ಮಂದಿ ಗಾಯಗೊಂಡಿದ್ದು ಅವರೆಲ್ಲರನ್ನೂ ಕಿಮ್ಸ್ ಆಸ್ಪತ್ರೆಗೆ (KIMS Hospital) ದಾಖಲಿಸಲಾಗಿದೆ. ರಾತ್ರಿ ಸುಮಾರು 12 ಗಂಟೆ ವೇಳೆಗೆ ಅಪಘಾತ ಸಂಭವಿಸಿದೆ. ಕೊಲ್ಹಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ (traveling from Kolhapur to Bangalore) ನ್ಯಾಷನಲ್ ಟ್ರಾವೆಲ್ಸ್ ಬಸ್, ಅಕ್ಕಿ ಸಾಗಣೆ ಮಾಡುತ್ತಿದ್ದ ಲಾರಿಗೆ ಮುಖಾಮುಖಿ ಡಿಕ್ಕಿಯಾಗಿದೆ. ಲಾರಿಯಲ್ಲಿದ್ದ ಚಾಲಕ, ಕ್ಲೀನರ್ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಖಾಸಗಿ ಬಸ್ನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ. ಕಿಮ್ಸ್ ಆಸ್ಪತ್ರೆಗೆ ಹುಬ್ಬಳ್ಳಿ-ಧಾರವಾಡದ ಪೊಲೀಸ್ ಆಯುಕ್ತ (Hubli-Dharwad Police Commissioner) ಲಾಬೂರಾವ್ ಭೇಟಿ ನೀಡಿ, ಗಾಯಾಳುಗಳಿಗೆ ಸಾಂತ್ವನ ಹೇಳಿದರು.

ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ 25 ಜನರಿಗೆ ಚಿಕಿತ್ಸೆ ಮುಂದುವರಿದಿದೆ (Continuing treatment of 25 people at KIMS Hospital). ಅಪಘಾತದಿಂದ ನಜ್ಜುಗುಜ್ಜಾಗಿರುವ ಎರಡೂ ವಾಹನಗಳನ್ನು ಪೊಲೀಸರು ತೆರವುಗೊಳಿಸಿ (Hubli Police cleared both vehicles), ವಾಹನ ಓಡಾಟಕ್ಕೆ ಅನುವು ಮಾಡಿಕೊಟ್ಟರು.
Accident In Hubli 8 Died Private Bus Lorry Collided




