ಅಂಬಾನಿ ಕುಟುಂಬಕ್ಕೆ ಬೆದರಿಕೆ ಕರೆಗಳು

ಖ್ಯಾತ ಕೈಗಾರಿಕೋದ್ಯಮಿ ಹಾಗೂ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಖೇಶ್ ಅಂಬಾನಿ ಕುಟುಂಬಕ್ಕೆ ಮತ್ತೊಮ್ಮೆ ಬೆದರಿಕೆ ಬಂದಿದೆ.

ಮುಂಬೈ: ಖ್ಯಾತ ಕೈಗಾರಿಕೋದ್ಯಮಿ ಹಾಗೂ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಖೇಶ್ ಅಂಬಾನಿ ಕುಟುಂಬಕ್ಕೆ ಮತ್ತೊಮ್ಮೆ ಬೆದರಿಕೆ ಬಂದಿದೆ. ಗಿರ್ಗಾಂವ್‌ನ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ಅಂಬಾನಿ ಕುಟುಂಬಕ್ಕೆ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಬಹಿರಂಗಪಡಿಸಿದ್ದಾರೆ.

ಸೋಮವಾರ ಬೆಳಗ್ಗೆ 10.30ರ ಸುಮಾರಿಗೆ ವ್ಯಕ್ತಿ ಮೂರ್ನಾಲ್ಕು ಬಾರಿ ಫೋನ್ ಮಾಡಿ ಅಂಬಾನಿ ಕುಟುಂಬಕ್ಕೆ ಬೆದರಿಕೆ ಹಾಕಿದ್ದಾನೆ.

ಅದರ ನಂತರ, ಮುಂಬೈ ನಗರ ಪೊಲೀಸರು ಮಧ್ಯಪ್ರವೇಶಿಸಿ ದಹಿಸರ್ ಪ್ರದೇಶದಲ್ಲಿ ಶಂಕಿತನನ್ನು ಬಂಧಿಸಿದರು. ಪ್ರಾಥಮಿಕ ತನಿಖೆಯಿಂದ ವ್ಯಕ್ತಿ ಮಾನಸಿಕ ಅಸ್ವಸ್ಥ ಎಂದು ತಿಳಿದು ಬಂದಿದೆ ಎಂದು ಹೇಳಲಾಗಿದೆ.

ಕಳೆದ ವರ್ಷ ಫೆಬ್ರುವರಿಯಲ್ಲಿ ಮುಖೇಶ್ ಅಂಬಾನಿ ಅವರ ನಿವಾಸ ‘ಆಂಟಿಲಿಯಾ’ ಬಳಿ ಸ್ಫೋಟಕಗಳನ್ನು ತುಂಬಿದ ಎಸ್ ಯುವಿ ವಾಹನವನ್ನು ನಿಲ್ಲಿಸಿದ್ದು ಗೊತ್ತೇ ಇದೆ.

ambani family gets threat calls