Welcome To Kannada News Today

ಅಕ್ರಮವಾಗಿ ದಾಸ್ತಾನಿಟ್ಟಿದ್ದ 600 ಕ್ವಿಂಟಲ್ ಅನ್ನಭಾಗ್ಯ ಅಕ್ಕಿ ವಶ

ಜಿಲ್ಲಾಧಿಕಾರಿ ಜಿ. ಜಗದೀಶ್ ನೇತೃತ್ವದಲ್ಲಿ ದಿಢೀರ್ ದಾಳಿ - ಅಕ್ರಮವಾಗಿ ದಾಸ್ತಾನಿಟ್ಟಿದ್ದ ಅನ್ನಭಾಗ್ಯ ಅಕ್ಕಿ ವಶ

The latest news today at your fingertips ! 👇
Kannada News Today an Google News
Google
Kannada news Today Koo App
Koo App
Kannada News Today App an Google Play Store
News App
Kannada News Today on Twitter
Twitter
Kannada news Today Facebook Page
Fb
🌐 Kannada News :

( Kannada News Today ) : ಉಡುಪಿ : ಅಕ್ರಮವಾಗಿ ದಾಸ್ತಾನಿಟ್ಟಿದ್ದ 600 ಕ್ವಿಂಟಲ್ ಅನ್ನಭಾಗ್ಯ ಅಕ್ಕಿ ವಶ : ಬ್ರಹ್ಮಾವರ ತಾಲೂಕು ಶಿರಿಯಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಮರ್ಗಿಯಲ್ಲಿ ಕಾರ್ಯಾಚರಿಸುತ್ತಿದ್ದ ರೈಸ್ ಮಿಲ್ ಮೇಲೆ ಜಿಲ್ಲಾಧಿಕಾರಿ ಜಿ. ಜಗದೀಶ್ ನೇತೃತ್ವದ ಅಧಿಕಾರಿಗಳ ತಂಡ ಸೋಮವಾರ ದಿಢೀರ್ ದಾಳಿ ನಡೆಸಿದೆ.

ಸೋಮವಾರ ಮಧ್ಯಾಹ್ನ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದು, ಸರಕಾರದ ಅನ್ನಭಾಗ್ಯ ಯೋಜನೆಯ ಸುಮಾರು 600 ಕ್ವಿಂಟಾಲ್‌ಗೂ ಅಧಿಕ ತೂಕದ ಅಕ್ಕಿಯನ್ನು ವಶಪಡಿಸಿಕೊಂಡಿದೆ.

ಜಿಲ್ಲೆಯಲ್ಲಿ ಅನ್ನಭಾಗ್ಯದ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮತ್ತು ದಾಸ್ತಾನು ಮಾಡುತ್ತಿರುವ ಬಗ್ಗೆ ಕಳೆದ ಒಂದೊAದು ತಿಂಗಳಿನಿAದ ಸತತವಾಗಿ ಮಾಹಿತಿಯನ್ನು ಸಂಗ್ರಹಿಸಿ, ಈ ದಾಳಿಯನ್ನು ನಡೆಸಲಾಗಿದೆ. ಅಂದಾಜು 16.5 ಲಕ್ಷ ರೂ. ಮೌಲ್ಯದ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ 3 ಲಾರಿ ಚಾಲಕರು ಮತ್ತು ಕ್ಲೀನರ್ ಸೇರಿದಂತೆ, 6 ಲಾರಿ, ಎರಡು 407, ಒಂದು ಟಾಟಾ 909 ಹಾಗೂ ಮಾರುತಿ ಇಕೋ ವಾಹನಗಳನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

ಜಿಲ್ಲೆಯಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾರಾಟ ಮಾಡುವ ಜಾಲ ಸಕ್ರಿಯವಾಗಿದೆ. ಕಳೆದ ತಿಂಗಳು ಕುಂದಾಪುರ ತಾಲೂಕಿನಲ್ಲಿ ಈ ರೀತಿಯ ಜಾಲವನ್ನು ಪತ್ತೆ ಮಾಡಲಾಗಿದೆ.

ಜಿಲ್ಲೆಯಲ್ಲಿರುವ ಇಂತಹ ಜಾಲಗಳನ್ನು ಪತ್ತೆ ಹಚ್ಚಲು ಜಿಲ್ಲಾಡಳಿತ ಸಕಲ ಪ್ರಯತ್ನ ಮಾಡುತ್ತಿದ್ದು, ಸಾರ್ವಜನಿಕರು ಪಡಿತರ ಅಕ್ಕಿಯ ಅಕ್ರಮ ದಾಸ್ತಾನು, ಸಾಗಾಟ ಕುರಿತು ಮಾಹಿತಿ ಇದ್ದಲ್ಲಿ ಜಿಲ್ಲಾಡಳಿತಕ್ಕೆ ಮಾಹಿತಿ ಕೊಟ್ಟರೆ ಕೂಡಲೇ ಕ್ರಮ ಕೈಗೊಳ್ಳಲು ಸಾಧ್ಯವಾಗಲಿದೆ. ಸಾರ್ವಜನಿಕರೂ ಸಹ ತಮಗೆ ನೀಡಲಾಗುವ ಅಕ್ಕಿಯನ್ನು ಮಾರಾಟ ಮಾಡದೆ, ಸದುಪಯೋಗ ಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ದಾಳಿಯಲ್ಲಿ ಆಹಾರ ಇಲಾಖೆಯ ಉಪ ನಿರ್ದೇಶಕ ಗಜೇಂದ್ರ, ಆಹಾರ ನಿರೀಕ್ಷಕರಾದ ಪಾರ್ವತಿ, ಸುರೇಶ್ ಭಾಗವಹಿಸಿದ್ದರು.

Get Latest Kannada News an up-to-date news coverage

ಕ್ಷಣ ಕ್ಷಣದ ಕನ್ನಡ ಸುದ್ದಿಗಳಿಗಾಗಿ FacebookTwitterYouTube ಅನುಸರಿಸಿ.

Google News ಹಾಗೂ Kannada News Today App ನಲ್ಲಿ ಎಲ್ಲಾ ಅಪ್ಡೇಟ್ ಪಡೆಯಿರಿ