ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿಸಲು ಯತ್ನಿಸುತ್ತಿದ್ದಾರೆ, ಶಾರುಖ್ ಖಾನ್ ಪುತ್ರ ಆರ್ಯನ್ ಆರೋಪ

ಆರ್ಯನ್ ಖಾನ್ ಮುಂಬೈ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದು , ಎನ್‌ಸಿಪಿ ಅಧಿಕಾರಿಗಳು ನನ್ನನ್ನು ಡ್ರಗ್ ಪ್ರಕರಣದಲ್ಲಿ ಸಿಲುಕಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಮುಂಬೈ: ಆರ್ಯನ್ ಖಾನ್ ಮುಂಬೈ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದು , ಎನ್‌ಸಿಪಿ ಅಧಿಕಾರಿಗಳು ನನ್ನನ್ನು ಡ್ರಗ್ ಪ್ರಕರಣದಲ್ಲಿ ಸಿಲುಕಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಮಾದಕ ದ್ರವ್ಯ ವಿರೋಧಿ ಅಧಿಕಾರಿಗಳು ಮುಂಬೈನಿಂದ ಗೋವಾಕ್ಕೆ ತೆರಳುತ್ತಿದ್ದ ಐಷಾರಾಮಿ ಹಡಗಿನ ಮೇಲೆ ದಾಳಿ ನಡೆಸಿದರು. ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಸೇರಿದಂತೆ 20 ಜನರನ್ನು ಅಲ್ಲಿ ಪಾರ್ಟಿಯಲ್ಲಿ ಡ್ರಗ್ಸ್ ಬಳಸಿದ ಆರೋಪದ ಮೇಲೆ ಬಂಧಿಸಲಾಗಿದೆ.

ಮುಂಬೈ ವಿಶೇಷ ನ್ಯಾಯಾಲಯ ಆರ್ಯನ್ ಖಾನ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ ಇದರ ವಿರುದ್ಧ ಅವರು ಮುಂಬೈ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಸಿಪಿ ಅಧಿಕಾರಿಗಳು ಬಾಲಿವುಡ್ ನಟಿ ಅನನ್ಯಾ ಪಾಂಡೆಯನ್ನು ಸಹ ತನಿಖೆ ನಡೆಸುತ್ತಿದ್ದಾರೆ. ಅವರು ಪ್ರಾಸಿಕ್ಯೂಷನ್ ಸಾಕ್ಷಿಯಾಗುತ್ತಾರೆ ಎಂದು ತೋರುತ್ತಿದೆ. ಇದು ಆರ್ಯನ್ ಖಾನ್ ಗೆ ಸಮಸ್ಯೆಯನ್ನು ಹೆಚ್ಚಿಸುತ್ತದೆ ಎಂದು ಹೇಳಲಾಗಿದೆ.