Welcome To Kannada News Today

ಬೆಳಗಾವಿ : ಜಿಲ್ಲಾಧಿಕಾರಿ ಬಂಗಲೆಯಲ್ಲಿ ಕರ್ತವ್ಯ ನಿರತ ಪೊಲೀಸ್ ಪೇದೆ ಆತ್ಮಹತ್ಯೆ

ಬೆಳಗಾವಿ ಜಿಲ್ಲಾಧಿಕಾರಿಗಳ ಬಂಗಲೆಯಲ್ಲಿ ಕರ್ತವ್ಯ ನಿರತ ಪೊಲೀಸ್‌ ಪೇದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

🌐 Kannada News :

ಬೆಳಗಾವಿ : ಮೇ 6 ರ ಬುಧವಾರ ಬೆಳಗಾವಿ ಜಿಲ್ಲಾಧಿಕಾರಿ ಭದ್ರತಾ ಪೊಲೀಸ್ ಸಿಬ್ಬಂದಿ ಸ್ವತಃ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೌದು, ಗುಂಡು ಹಾರಿಸಿಕೊಂಡು ಸಿಎಆರ್ ಪೊಲೀಸ್ ಪೇದೆಯೊರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲಾಧಿಕಾರಿಗಳ ಬಂಗಲೆಯಲ್ಲಿ ನಡೆದಿದೆ.

ಘಟನೆ ಬೆಳಗಾವಿಯ ವಿಶ್ವೇಶ್ವರಯ್ಯ ನಗರದಲ್ಲಿ ಇಂದು ನಡೆದಿದ್ದು, ಬೆಳಗಾವಿ ಡಿಸಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರ ಬಂಗಲೆಯಲ್ಲಿ ಗಾರ್ಡ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಸಶಸ್ತ್ರ ಮೀಸಲು ಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಿತ್ತೂರ ತಾಲೂಕಿನ ಅಂಬಡಗಟ್ಟಿಯ ಪ್ರಕಾಶ ಗುರವಯ್ಯನವರ ಎಂಬಾತನೇ ಆತ್ಮಹತ್ಯೆ ಮಾಡಿಕೊಂಡಿರುವ ಸಿಎಆರ್ ಪೊಲೀಸ್ ಪೇದೆ.

ತಾನಿದ್ದ ಜಾಗದಲ್ಲಿಯೇ ಎಸ್‌ಎಲ್‌ಆರ್ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಪೇದೆ ಆತ್ಮಹತ್ಯೆ ಮಾಡಿಕೊಂಡಿದ್ದು. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸ್ ಕಮಿಷನರ್ ಬಿಎಸ್ ಲೋಕೇಶ್‌ಕುಮಾರ್  ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಇನ್ನು ಆತ್ಮಹತ್ಯೆ ಮಾಡಿಕೊಂಡಿರುವ ಪೊಲೀಸ್ ಪೇದೆ ಪ್ರಕಾಶ್ ಕಳೆದ ಎರಡು ವರ್ಷಗಳಿಂದ ಸ್ಟಿಜೋಪಿನಿಯಾ ಎಂಬ ಮನೋವ್ಯಾಧಿಯಿಂದ ಬಳಲುತ್ತಿದ್ದ ಎಂಬ ಮಾಹಿತಿ ಸಿಕ್ಕಿದೆ. ಅದೇ ರೀತಿ ಡಿಸಿ ಎಸ್.ಬಿ.ಬೊಮ್ಮನಹಳ್ಳಿ ಸೇರಿ ಮನೆಯಲ್ಲಿ ಕೆಲಸ ಮಾಡುವ ಸಿಬ್ಬಂದಿಯಿಂದ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಇನ್ನು ಈ ಸಂಬಂಧ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸ್ಥಳಕ್ಕೆ ಬಂದಿದ್ದ ಕಾನ್‍ಸ್ಟೇಬಲ್ ಪ್ರಕಾಶ್ ತಾಯಿ ಆಕ್ರಂದನ ಮುಗಿಲು ಮುಟ್ಟಿತ್ತು. ಎರಡು ಮಕ್ಕಳಿರುವ ಪೇದೆ ಪ್ರಕಾಶ್ ಮನೆಗೆ ಹೋಗದೆ ಎರಡು ತಿಂಗಳಾಗಿತ್ತು. ಕೊರೊನಾದಿಂದ ನಿರಂತರ ಕರ್ತವ್ಯದಲ್ಲಿ ತೊಡಗಿದ್ದ ಪ್ರಕಾಶ್ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

Web Title :

Get Latest Kannada News an up-to-date news coverage

ಕ್ಷಣ ಕ್ಷಣದ ಕನ್ನಡ ಸುದ್ದಿಗಳಿಗಾಗಿ FacebookTwitterYouTube ಅನುಸರಿಸಿ.