ಗುಂಡೇಟಿನಿಂದ ಉದ್ಯಮಿ ಸಾವು, ಬುಲೆಟ್ ನಿಂದ ಪತ್ನಿಗೆ ಗಾಯ
ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಗೆ ಉದ್ಯಮಿಯೊಬ್ಬರು ಸಾವನ್ನಪ್ಪಿದ್ದಾರೆ
ಪಾಟ್ನಾ: ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಗೆ ಉದ್ಯಮಿಯೊಬ್ಬರು ಸಾವನ್ನಪ್ಪಿದ್ದಾರೆ. ಅವರ ಪತ್ನಿಗೂ ಬುಲೆಟ್ ಗಾಯಗಳಾಗಿವೆ. ಬಿಹಾರದ ಕತಿಹಾರ್‌ನಲ್ಲಿ ಹಗಲು ಹೊತ್ತಿನಲ್ಲಿ ಈ ಘಟನೆ ನಡೆದಿದೆ. ಕೆಲಬರಿ ಗ್ರಾಮದ 35 ವರ್ಷದ ಮೇಘನಾಥ ಯಾದವ್ ವೃತ್ತಿಯಲ್ಲಿ ವ್ಯಾಪಾರಿ. ಶನಿವಾರ ಬೆಳಗ್ಗೆ ಬೈಕ್‌ನಲ್ಲಿ ಪತ್ನಿಯೊಂದಿಗೆ ಸ್ಥಳೀಯ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಬಳಿಕ ಬೈಕ್ ನಲ್ಲಿ ವಾಪಸ್ಸಾಗುತ್ತಿದ್ದಾಗ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಸಮೀಪದಿಂದ ಗುಂಡು ಹಾರಿಸಿ ಪರಾರಿಯಾಗಿದ್ದಾರೆ.
ಬಿಹಾರ-ಪಶ್ಚಿಮ ಬಂಗಾಳ ಗಡಿಯಲ್ಲಿರುವ ಅಜ್ಮಾನ್‌ನಗರ ಪಾಲ್ಸಾ-ಬಕ್ಚಲ್ಲಾ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಇದರಿಂದ ಬೈಕ್ ಚಲಾಯಿಸುತ್ತಿದ್ದ ಮೇಘನಾಥ್ ಕೆಳಗೆ ಬಿದ್ದಿದ್ದಾರೆ. ಬೈಕ್‌ನಲ್ಲಿ ಹಿಂದೆ ಕುಳಿತಿದ್ದ ಅವರ ಪತ್ನಿಗೂ ಗುಂಡು ತಗುಲಿದೆ.
ಶೀಘ್ರವೇ ಪ್ರತಿಕ್ರಿಯಿಸಿದ ಸ್ಥಳೀಯರು ಉದ್ಯಮಿ ಮೇಘನಾಥ್‌ನನ್ನು ಅಜಮಾನ್‌ನಗರ ಪ್ರಾಥಮಿಕ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ವೈದ್ಯರು ಅವರು ಈಗಾಗಲೇ ಮೃತಪಟ್ಟಿದ್ದಾರೆ ಎಂದು ಹೇಳಿದರು. ಗುಂಡಿನ ದಾಳಿಯಿಂದ ಗಾಯಗೊಂಡ ಪತ್ನಿ ಕತಿಹಾರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರು ಮೇಘನಾಥ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕತಿಹಾರ್ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
bihar-businessman-shot-dead-in-broad-daylight-wife-sustained-injuries