ಬೆಂಗಳೂರು : KSRTC ಬಸ್ ಹರಿದು ದ್ವಿಚಕ್ರ ವಾಹನ ಸವಾರ ಸಾವು

ಕೆಎಸ್‌ಆರ್‌ಟಿಸಿ ಬಸ್ (KSRTC Bus) ಹರಿದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಧಾರುಣ ಘಟನೆ ಬೆಂಗಳೂರಿನ ಕೊಡಿಗೇಹಳ್ಳಿ ಸರ್ಕಲ್ ಬಳಿ ನಡೆದಿದೆ.

ಬೆಂಗಳೂರು (Bengaluru) : ಕೆಎಸ್‌ಆರ್‌ಟಿಸಿ ಬಸ್ (KSRTC Bus) ಹರಿದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಧಾರುಣ ಘಟನೆ ಬೆಂಗಳೂರಿನ ಕೊಡಿಗೇಹಳ್ಳಿ ಸರ್ಕಲ್ (Kodigehalli) ಬಳಿ ನಡೆದಿದೆ. ಬೈಕ್ ಸವಾರ ಕಾವೇರಿ ಭವನದಿಂದ ದೊಡ್ಡಬಳ್ಳಾಪುರ (Doddaballapur) ಕಡೆಗೆ ಹೋಗುತ್ತಿದ್ದ ಎನ್ನಾಲಾಗಿದೆ. ಕೆಎ-40ಎಫ್-0994 ನ ಬೈಕ್ ಸವಾರನೇ ಸ್ಥಳದಲ್ಲೇ ಸಾವನ್ನಪ್ಪಿದ ವ್ಯಕ್ತಿ.

ಅಪಘಾತ ಸಂಭವಿಸಿದ ಕೆಎಸ್‌ಆರ್‌ಟಿಸಿ ಬಸ್‌ನ ಚಾಲಕ ಮತ್ತು ಕಂಡಕ್ಟರ್ ಸ್ಥಳದಿಂದ ಪರಾರಿಯಾಗಿದ್ದಾರೆ. ಮೃತ ಸವಾರನ ಗುರುತು ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಬಂದ ಸಂಚಾರಿ ಪೊಲೀಸರು ಪರಿಶೀಲನೆ ನಡೆಸಿ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಮೃತನ ಗುರುತು ಪತ್ತೆ ಹಚ್ಚಲಾಗುತ್ತಿದೆ, ಘಟನೆ ಬಳಿಕ ಕೆಲಕಾಲ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.

Stay updated with us for all News in Kannada at Facebook | Twitter
Scroll Down To More News Today