ಪಾಟ್ನಾ ಸಿವಿಲ್ ಕೋರ್ಟ್ ನಲ್ಲಿ ಸ್ಫೋಟ, ಕಾನ್ ಸ್ಟೇಬಲ್ ಗೆ ಗಾಯ
ಪಾಟ್ನಾ: ಬಿಹಾರದ ರಾಜಧಾನಿ ಪಾಟ್ನಾದ ಸಿವಿಲ್ ಕೋರ್ಟ್‌ನಲ್ಲಿ ಶುಕ್ರವಾರ ಮಧ್ಯಾಹ್ನ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಒಬ್ಬ ಕಾನ್‌ಸ್ಟೆಬಲ್ ಗಾಯಗೊಂಡಿದ್ದಾರೆ. ಕಾನ್ ಸ್ಟೇಬಲ್ ನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಯಿತು. ಸ್ಫೋಟದ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.
ಲಘು ಸ್ಫೋಟ ಆಗಿದ್ದರಿಂದ ಹೆಚ್ಚಿನ ಪ್ರಾಣಹಾನಿ ಸಂಭವಿಸದ ಕಾರಣ ಎಲ್ಲರೂ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಸ್ಫೋಟಕ್ಕೆ ಕಾರಣ ಇನ್ನೂ ಬಹಿರಂಗವಾಗಿಲ್ಲ. ಪ್ರಾಥಮಿಕ ತನಿಖೆಯ ನಂತರ ಘಟನೆಯ ಕುರಿತು ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಾಯಗೊಂಡ ಕಾನ್‌ಸ್ಟೆಬಲ್‌ನನ್ನು ತಕ್ಷಣ ವೈದ್ಯಕೀಯ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಕಡಿಮೆ ತೀವ್ರತೆಯ ಸ್ಫೋಟ ಸಂಭವಿಸಿದ್ದು, ಇದರಲ್ಲಿ ಒಬ್ಬ ಕಾನ್‌ಸ್ಟೆಬಲ್ ಗಾಯಗೊಂಡಿದ್ದಾರೆ. ತಕ್ಷಣ ಪೊಲೀಸರು ನ್ಯಾಯಾಲಯಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು.
A low-intensity blast was reported in the civil court of Patna on Friday
Our Whatsapp Channel is Live Now 👇