Horrific Accident : ಎರಡು ಲಾರಿಗಳ ನಡುವೆ ನಜ್ಜುಗುಜ್ಜಾದ ಕಾರು, ವೈರಲ್ ವೀಡಿಯೋ
Horrific Accident : ಎರಡು ಲಾರಿಗಳ ನಡುವೆ ಕಾರೊಂದು ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಕಾರು ಚಾಲಕ ಸಾವನ್ನಪ್ಪಿದ್ದಾನೆ. ಒಡಿಶಾದ ರಾಜಧಾನಿ ಭುವನೇಶ್ವರದಲ್ಲಿ ಈ ದುರಂತ ಸಂಭವಿಸಿದೆ.
ಭುವನೇಶ್ವರ: ಎರಡು ಲಾರಿಗಳ ನಡುವೆ ಕಾರೊಂದು ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಕಾರು ಚಾಲಕ ಸಾವನ್ನಪ್ಪಿದ್ದಾನೆ. ಒಡಿಶಾದ ರಾಜಧಾನಿ ಭುವನೇಶ್ವರದಲ್ಲಿ ಈ ದುರಂತ ಸಂಭವಿಸಿದೆ. ಸೋಮವಾರ ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ 16ರಲ್ಲಿ ಟ್ರಾಫಿಕ್ ಸಿಗ್ನಲ್ ನಲ್ಲಿ ಈ ಅವಘಡ ಸಂಭವಿಸಿದೆ.
ಲಾರಿಯೊಂದರ ಹಿಂದೆ ಎರಡು ಕಾರುಗಳು ನಿಂತಿದ್ದವು. ಅಷ್ಟರಲ್ಲಿ ವೇಗವಾಗಿ ಬಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದೆ. ನೀಲಿ ಬಣ್ಣದ ಕಾರು ಎರಡು ಲಾರಿಗಳ ನಡುವೆ ಸಿಲುಕಿ ನಜ್ಜುಗುಜ್ಜಾಗಿದೆ. ನೀಲಿ ಕಾರಿನ ಚಾಲಕ ದುರಂತ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ. ಸರಣಿಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
Absolutely horrific accident on the NH16 in Palasuni, Bhubaneswar today. Traffic at a standstill. Notice the blue car. pic.twitter.com/669Ytg0u8N
— Samiran Mishra (@scoutdesk) April 4, 2022
ಅಪಘಾತ ಮಾಡಿದ ಲಾರಿ ಚಾಲಕ ತಕ್ಷಣ ಸ್ಥಳದಿಂದ ಪರಾರಿಯಾಗಿದ್ದಾನೆ. ಏತನ್ಮಧ್ಯೆ, ಘಟನೆಯ ಹಿನ್ನೆಲೆಯಲ್ಲಿ ಸುಮಾರು ಐದು ಗಂಟೆಗಳ ಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪರಾರಿಯಾಗಿರುವ ಲಾರಿ ಚಾಲಕನಿಗಾಗಿ ಶೋಧ ನಡೆಸುತ್ತಿದ್ದಾರೆ. ಸಿಸಿಟಿವಿಯಲ್ಲಿ ದಾಖಲಾದ ಭೀಕರ ಅಪಘಾತದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
A car was crushed between two trucks in a horrific road accident in Odisha’s capital Bhubaneswar on Monday morning.
Follow Us on : Google News | Facebook | Twitter | YouTube