ಚಂದ್ರಶೇಖರ್ ಗುರೂಜಿ ಹತ್ಯೆ ಆರೋಪಿಗಳು ಅರೆಸ್ಟ್ !
ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ ಅವರನ್ನು ಹತ್ಯೆ ಮಾಡಿದ ನಾಲ್ಕು ಘಂಟೆಗಳಲ್ಲೇ ಹಂತಕರನ್ನು ಹಿಡಿಯುವಲ್ಲಿ ಪೊಲೀಸರು ಯಶಸ್ವಿ
ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ ಅವರನ್ನು ಹತ್ಯೆ ಮಾಡಿದ ನಾಲ್ಕು ಘಂಟೆಗಳಲ್ಲೇ ಹಂತಕರನ್ನು ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಹತ್ಯೆ ಬಳಿಕ ಹಂತಕರು ಕಾರಿನಲ್ಲಿ ಪರಾರಿಯಾಗಿದ್ದರು.
ಈ ವೇಳೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂಬ ಸುದ್ದಿ ಲಭ್ಯವಾಗಿದೆ, ಕೇವಲ ನಾಲ್ಕು ಘಂಟೆಗಳಲ್ಲಿ ಪ್ರವೃತ್ತರಾದ ಪೊಲೀಸರು ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಖ್ಯಾತ ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ ಹತ್ಯೆ ಆರೋಪಿಗಳನ್ನು ಬಂಧಿಸಲಾಗಿದೆ.
ಇದನ್ನೂ ಓದಿ : ಸರಳ ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ ಬಗ್ಗೆ ತಿಳಿಯಿರಿ
ಇದನ್ನೂ ಓದಿ : About Chandrashekhar Guruji, ಸರಳ ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ ಬಗೆಗೆ ಒಂದಿಷ್ಟು ಮಾಹಿತಿ
ವಾಸ್ತು ಮೂಲಕ ಖ್ಯಾತಿ ಪಡೆದಿದ್ದ ಚಂದ್ರಶೇಖರ್ ಅವರನ್ನು ಖಾಸಗಿ ಹೋಟೆಲ್ ನಲ್ಲಿ ಚಾಕು ಇರಿದು ಹತ್ಯೆ ಮಾಡಲಾಗಿತ್ತು. ನಂತರ ಕಾರಿನಲ್ಲಿ ಪರಾರಿಯಾಗಲು ಯತ್ನಿಸಿದ್ದರು. ಬಂಧಿತರನ್ನು ಮಹಾಂತೇಶ್ ಮತ್ತು ಮಂಜುನಾಥ್ ಎನ್ನಲಾಗಿದೆ, ಇವರಿಬ್ಬರು ಗುರೂಜಿಯ ಆಪ್ತರು ಎಂಬುದು ಆಶ್ಚರ್ಯ ಸಂಗತಿ. ಬಂಧಿತರನ್ನು ಧಾರವಾಡ ಗೋಕುಲ ರಸ್ತೆ ಠಾಣೆಯ ಪೊಲೀಸರು ರಾಮದುರ್ಗ ಬಸವೇಶ್ವರ ಸರ್ಕಲ್ ನಲ್ಲಿ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : Chandrashekhar Guruji Murder ಸರಳ ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ ಕೊಲೆ
Chandrashekhar Guruji murder accused arrested
Follow us On
Google News |