ಸಹೋದ್ಯೋಗಿಗಳ ಮೇಲೆ ಪೊಲೀಸ್ ಗುಂಡಿನ ದಾಳಿ… ಇಬ್ಬರ ಸಾವು, ಒಬ್ಬರಿಗೆ ಗಾಯ
ಪೊಲೀಸ್ ಪೇದೆಯೊಬ್ಬ ತನ್ನ ಸಹೋದ್ಯೋಗಿಗಳ ಮೇಲೆ ಬಂದೂಕಿನಿಂದ ಗುಂಡು ಹಾರಿಸಿದ್ದಾನೆ
ನವದೆಹಲಿ: ಪೊಲೀಸ್ ಪೇದೆಯೊಬ್ಬ ತನ್ನ ಸಹೋದ್ಯೋಗಿಗಳ ಮೇಲೆ ಬಂದೂಕಿನಿಂದ ಗುಂಡು ಹಾರಿಸಿದ. ಪರಿಣಾಮ ಇಬ್ಬರು ಪೊಲೀಸರು ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೋಮವಾರ ಈ ಘಟನೆ ನಡೆದಿದೆ.
ಗಾಯಗೊಂಡ ಪೊಲೀಸರನ್ನು ಅಬೇಡ್ಕರ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಬಳಿಕ ಗುಂಡು ಹಾರಿಸಿದ ಆರೋಪಿ ದೆಹಲಿ ಪೊಲೀಸರಿಗೆ ಶರಣಾಗಿದ್ದಾನೆ. ಇದರೊಂದಿಗೆ ಆತನನ್ನು ಬಂಧಿಸಲಾಯಿತು. ಘಟನೆ ಕುರಿತು ತನಿಖೆ ನಡೆಸಲಾಗುತ್ತಿದೆ.
ಇತ್ತೀಚೆಗಷ್ಟೇ ಜಮ್ಮು ಮತ್ತು ಕಾಶ್ಮೀರದಲ್ಲಿ ಇಂತಹದ್ದೇ ಘಟನೆ ನಡೆದಿದೆ. ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಯೋಧನೊಬ್ಬ ತನ್ನ ಮೂವರು ಸಹೋದ್ಯೋಗಿಗಳ ಮೇಲೆ ಉಧಮ್‌ಪುರ ಜಿಲ್ಲೆಯಲ್ಲಿ ಗುಂಡಿನ ದಾಳಿ ನಡೆಸಿದ್ದಾನೆ. ಬಳಿಕ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತನು ಸಾವನ್ನಪ್ಪಿದ್ದಾನೆ.
cop shoots colleagues in delhi haiderpur area 2 killed one hurt
Follow us On
Google News |
Advertisement