ಟ್ಯೂಷನ್ ಗೆ ಬಂದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಂದ ಶಿಕ್ಷಕನಿಗೆ ಜೀವಾವಧಿ ಶಿಕ್ಷೆ

Story Highlights

ಟ್ಯೂಷನ್ ಗೆ ಬಂದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಂದ ಶಿಕ್ಷಕನಿಗೆ ಮಂಡ್ಯದ 1ನೇ ತ್ವರಿತ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ಮಂಡ್ಯ (Mandya): ಟ್ಯೂಷನ್ ಗೆ ಬಂದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಂದ ಶಿಕ್ಷಕನಿಗೆ ಮಂಡ್ಯದ 1ನೇ ತ್ವರಿತ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ಟ್ಯೂಷನ್ ಸೆಂಟರ್ (Tuition Center) ನಡೆಸುತ್ತಿರುವ ಕಾಂತರಾಜು (52) ಆರೋಪಿ.

2022ರ ಅಕ್ಟೋಬರ್‌ನಲ್ಲಿ ಟ್ಯೂಷನ್‌ಗೆ ಬಂದಿದ್ದ ಬಾಲಕಿಯ ಮೇಲೆ ಚಾಕೊಲೇಟ್ ನೀಡುವ ಭರವಸೆಯೊಂದಿಗೆ ಸಮೀಪದ ನಿರ್ಜನ ಸ್ಥಳದಲ್ಲಿ ಅತ್ಯಾಚಾರ ಎಸಗಿ, ಬಳಿಕ ಆಕೆಯನ್ನು ಕೊಂದು ಬಾಲಕಿಯ ಶವವನ್ನು ನಿರ್ಮಾಣ ಹಂತದಲ್ಲಿರುವ ಮನೆಯೊಂದರ ಶೆಡ್‌ನಲ್ಲಿ ಎಸೆದಿದ್ದ.

ಬೆಂಗಳೂರಿನ ಬಾಗಲೂರಿನಲ್ಲಿ ಪತ್ನಿಯ ಶೀಲ ಶಂಕಿಸಿ ಪತಿಯಿಂದಲೇ ಬರ್ಬರ ಕೊಲೆ

ಈ ಪ್ರಕರಣ ಅಂದು ಜಿಲ್ಲೆಯಾದ್ಯಂತ ಸಂಚಲನ ಮೂಡಿಸಿತ್ತು. ತನಿಖೆ ಕೈಗೆತ್ತಿಕೊಂಡ ಮಳವಳ್ಳಿ ಪೊಲೀಸರು (Malavalli Police) ಆರೋಪಿ ಕಾಂತರಾಜ್ ನನ್ನು ಬಂಧಿಸಿ ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

ತನಿಖೆಯಲ್ಲಿ ಅಪರಾಧ ಸಾಬೀತಾಗಿದ್ದರಿಂದ ನ್ಯಾಯಾಧೀಶೆ ಮಂಜುಳಾ ಈ ತೀರ್ಪು ನೀಡಿದ್ದಾರೆ. ಪಬ್ಲಿಕ್ ಪ್ರಾಸಿಕ್ಯೂಟರ್ ವಿ.ಎಸ್.ಭಟ್ ಪ್ರಕರಣದ ವಾದ ಮಂಡಿಸಿದ್ದರು.

court in Mandya sentenced life imprisonment to the teacher who raped and killed a girl

Related Stories